Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಕಲಚೇತನ ಮಕ್ಕಳಿಗೆ ‘ವಿಶಿಷ್ಟ ಸಾಮರ್ಥ್ಯ...

ವಿಕಲಚೇತನ ಮಕ್ಕಳಿಗೆ ‘ವಿಶಿಷ್ಟ ಸಾಮರ್ಥ್ಯ ವನ ಪಾರ್ಕ್’ಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ16 May 2026 9:57 PM IST
share
ವಿಕಲಚೇತನ ಮಕ್ಕಳಿಗೆ ‘ವಿಶಿಷ್ಟ ಸಾಮರ್ಥ್ಯ ವನ ಪಾರ್ಕ್’ಗೆ ಶಿಲಾನ್ಯಾಸ

ಉಡುಪಿ, ಮೇ 16: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ‘ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ಮಾಡಲಾಗುತ್ತಿದೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಶನಿವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.

ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆಗಳು, ಉದ್ಯೋಗಾವಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.

ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1228 ವಿಕಲಚೇತನ ಮಕ್ಕಳಿದ್ದು ಇವರು ತಮ್ಮ ಕುಟುಂಬ ಸದಸ್ಯ ರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಇದಲ್ಲದೆ, ಇದರಲ್ಲಿ ಥೆರಪಿ ಸ್ವಿಂಗ್ಸ್ ಗಳು, ಬ್ಯಾಲನ್ಸ್ ಬೀಮ್ಸ್‌ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ ಆಟದ ವಲಯ ಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ.

ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಇಡೀ ರಾಜ್ಯ, ದೇಶಕ್ಕೆ ಮಾದರಿ ಆಗಬಲ್ಲ ಪಾರ್ಕ್ ಆಗಲಿದೆ. ಇದನ್ನು ನಾಲ್ಕು ವರ್ಷದಲ್ಲಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ಆದರೆ ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ನಮ್ಮ ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಇಲಾಖೆಯ ರುದ್ರಣ್ಣ, ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈವಿಠ್ಠಲ್, ಹರಿಪ್ರಸಾದ ರೈ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X