ಟಾಪರ್ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ, ಮೇ 16: ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ, 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಲಾ ವಿಭಾಗದ ಸುಮೇಧಾ ಯು, ವಿಜ್ಞಾನ ವಿಭಾಗದ ರಶ್ಮಿ, ವಾಣಿಜ್ಯ ವಿಭಾಗದ ಪ್ರೇರಣಾ ರಾಮ ಚಂದ್ರ ಹೆಗಡೆ, ಅನ್ನಿಕಾ ಅವರನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸನ್ಮಾನಿಸಿದರು.
ಇವರೊಂದಿಗೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಶಂಕರನಾರಾಯಣ ಮದರ್ ಥೆರೆಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರೀತಮ್ ಜಿ ಪೂಜಾರಿ (625) ಹಾಗೂ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಕುಂದಾಪುರ ಸರಕಾರಿ ಹೈಸ್ಕೂಲ್‌ನ ಅನನ್ಯಾ ಆಚಾರ್ಯ (616) ಅವರುಗಳನ್ನು ಸಹ ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ವಿಧಾನಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ, ಡಾ.ಮಂಜುನಾಥ್ ಭಂಡಾರಿ, ಎಂ.ಎ. ಗಫೂರ್ ಮತ್ತಿತರರು ಉಪಸ್ಥಿತರಿದ್ದರು.






