Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ...

ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ ಏಕನಿವೇಶನ ಒದಗಿಸಲು ಕ್ರಮಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 May 2026 6:38 PM IST
share
ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ ಏಕನಿವೇಶನ ಒದಗಿಸಲು ಕ್ರಮಕ್ಕೆ ಸೂಚನೆ

ಉಡುಪಿ, ಮೇ 19: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರಾಧಿಕಾರಕ್ಕೆ ಸಂಬಂಧಿತ ಕಡತಗಳ ಬಗ್ಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು

ಉಡುಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರ ಮನೆ ನಿರ್ಮಾಣ ಉದ್ದೇಶಕ್ಕೆ ತಾಂತ್ರಿಕ ಅಭಿಪ್ರಾಯ ನೀಡುವಲ್ಲಿ ಆಗುತ್ತಿರುವ ಸಮಸ್ಯೆ ಮತ್ತು ವಿಳಂಬವನ್ನು ಮನಗೊಂಡು ನಿಯಮಗಳಲ್ಲಿ ಕೆಲವೊಂದು ಸರಳೀಕರಣ ವಿಧಾನಗಳನ್ನು ಅಳವಡಿಸಿಕೊಳ್ಳಲು ಸೂಚಿಸಿದರು.

ಮನೆ ನಿರ್ಮಾಣದ ಏಕ ವಿನ್ಯಾಸ ಅನುಮೋದನೆ ಸಮಯದಲ್ಲಿ ಇತ್ತೀಚಿಗೆ ತಾತ್ಕಾಲಿಕ ಅನುಮೋದನೆ ಮತ್ತು ಅಂತಿಮ ಅನುಮೋದನೆ ಎಂಬ ಎರಡು ಹಂತಗಳನ್ನು ಅಳವಡಿಸಿರುವುದರಿಂದ ಅರ್ಜಿದಾರರಿಗೆ ಅನಗತ್ಯ ವಿಳಂಬ ಮತ್ತು ತೊಂದರೆ ಉಂಟಾಗುತ್ತಿದೆ. ರಸ್ತೆ ಅಗಲೀಕರಣವಿದ್ದಲ್ಲಿ ಈ ಹಿಂದಿನಂತೆ ಸ್ಥಳೀಯ ಸಂಸ್ಥೆಗಳಿಗೆ ಶರ್ತ ವಿಧಿಸಿ ಅಂತಿಮ ಅನುಮೋದನೆ ನೀಡುವುದು ಸೂಕ್ತವಾಗಿದೆ. ಅಗಲೀಕರಣದ ಜಾಗವು ಸರಕಾರಕ್ಕೆ ಹಸ್ತಾಂತರವಾಗಿರು ವುದನ್ನು ತಿಂಗಳು ಅಥವಾ ಮೂರು ತಿಂಗಳಿಗೊಮ್ಮೆ ನಿಗದಿತವಾಗಿ ವರದಿ ಪಡೆದುಕೊಳ್ಳುವುದರ ಮೂಲಕ ಖಾತ್ರಿಪಡಿಸಿಕೊಳ್ಳ ಬಹುದಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ದಶಕಗಳ ಹಿಂದೆ ನಿರ್ಮಾಣವಾದ ಸರಕಾರಿ ಬಡಾವಣೆಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಹಕ್ಕು ಪತ್ರ ಪಡೆದ ಫಲಾನುಭವಿಗಳ ಮನೆ ಮರು ನಿರ್ಮಾಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣ ಸೂಚಿಸುತ್ತಿರುವುದ ರಿಂದ ಕನಿಷ್ಠ ಮೂರರಿಂದ ಐದು ಸೆಂಟ್ಸ್ ಜಾಗ ಪಡೆದ ಅರ್ಜಿದಾರರ ಮನೆ ಮರು ನಿರ್ಮಾಣ ಕಷ್ಟಕರವಾಗಿದೆ. ಈಗಾಗಲೇ ಸದರಿ ಬಡಾವಣೆಗಳಲ್ಲಿ ಅಭಿವೃದ್ಧಿ ಬೆಳವಣಿಗೆಗಳು ಆಗಿರುವುದರಿಂದ ಈ ಹಿಂದಿನಂತೆ ಏಕ ವಿನ್ಯಾಸ ಅನುಮೋದ ನೆಯಿಂದ ವಿನಾಯತಿ ನೀಡಿ ಮನೆ ಮರು ನಿರ್ಮಾಣಕ್ಕೆ ಪರವಾನಿಗೆ ನೀಡಬೇಕಾಗಿದೆ. ಹೊಸ ಸರಕಾರಿ ಬಡಾವಣೆಗಳಿಗೆ ನಗರ ಪ್ರಾಧಿಕಾರದಿಂದ ಅನುಮೋದನೆ ನೀಡುವುದನ್ನು ಅಳವಡಿಸಿಕೊಳ್ಳಬಹುದಾಗಿದೆ ಎಂದರು.

ವಸತಿ ರಹಿತ ಕಡುಬಡ ಕುಟುಂಬಗಳಿಗೆ ಸರಕಾರ 94 ಸಿಸಿ ಕಾನೂನಿನಡಿ ಮಂಜೂರು ಮಾಡಿದ ಒಂದೆರಡು ಸೆಂಟ್ಸ್ ನಿವೇಶನಕ್ಕೆ ಏಕ ವಿನ್ಯಾಸ ಅನುಮೋದನೆ ಇಂದ ವಿನಾಯತಿ ನೀಡಬೇಕಾದ ಅಗತ್ಯತೆ ಇದೆ. 2008ರ ಬಳಿಕ ಉಡುಪಿ ನಗರದ ಸಮಗ್ರ ಮಾಸ್ಟರ್ ಪ್ಲ್ಯಾನ್ ತಯಾರಿಯಾಗದೇ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ 15 ದಿನದಲ್ಲಿ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್ ಅಸೋಸಿಯೇಷನ್, ಬಿಲ್ಡರ್ಸ್ ಅಸೋಸಿಯೇ ಷನ್ ಹಾಗೂ ವಿವಿಧ ಪರಿಣಿತರ ಜೊತೆ ಸಭೆ ನಡೆಸಿ, ಮಾಸ್ಟರ್ ಪ್ಲ್ಯಾನ್ ರೂಪಿಸುವ ಸಂಸ್ಥೆಯ ಪ್ರತಿನಿಧಿ ಗಳೊಂದಿಗೆ ಸಮಾಲೋಚನೆ ನಡೆಸಿ ಅತೀ ಶೀಘ್ರದಲ್ಲೇ ಮಾಸ್ಟರ್ ಪ್ಲ್ಯಾನ್ ಅಂಗೀಕಾರಕ್ಕೆ ಕ್ರಮ ವಹಿಸುವುದಾಗಿ ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಂಜುನಾಥ ಆರ್., ಅಧಿಕಾರಿಗಳಾದ ಸಚಿನ್, ಸತ್ಯ, ನಗರಸಭೆ ಮಾಜಿ ಸದಸ್ಯರು, ಇಂಜಿನಿಯರ್ ಹಾಗೂ ಬಿಲ್ಡರ್ಸ್ ಅಸೋಸಿಯೇಷನ್ ಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X