ಪತ್ರಕರ್ತ ಪ್ರಕಾಶ ಸುವರ್ಣಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಉಡುಪಿ, ಮೇ 19: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇದರ ವತಿಯಿಂದ ಮೇ 16ರಂದು ಕಾಸರಗೋಡಿನಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಉತ್ಸವದಲ್ಲಿ ಪತ್ರಕರ್ತ ಹಾಗೂ ಚಿತ್ರನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರಿಗೆ ಮಹಾದಾನಿ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮತ್ತು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಪ್ರಶಸ್ತಿ ಪ್ರದಾನ ಮಾಡಿದರು. ಗಡಿನಾಡ ಉತ್ಸವ ಸಮಿತಿಯ ಪ್ರಧಾನ ಸಂಚಾಲಕ ಶಿವಾನಂದ ಕೋಟ್ಯಾನ್ ಮಸ್ಕತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.
Next Story




