Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಾಕೃತಿಕ ವಿಕೋಪ ನಿಭಾಯಿಸಲು...

ಪ್ರಾಕೃತಿಕ ವಿಕೋಪ ನಿಭಾಯಿಸಲು ಸರ್ವಸನ್ನದ್ಧ: ಉಡುಪಿ ಡಿಸಿ ಸ್ವರೂಪ ಟಿ.ಕೆ

ವಾರ್ತಾಭಾರತಿವಾರ್ತಾಭಾರತಿ19 May 2026 8:48 PM IST
share
ಪ್ರಾಕೃತಿಕ ವಿಕೋಪ ನಿಭಾಯಿಸಲು ಸರ್ವಸನ್ನದ್ಧ: ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ, ಮೇ 19: ಮುಂಗಾರು ಮಳೆಯಾಗುವ ಮೇ 26ರಿಂದ ಆರಂಭವಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆ ಮೂಲಕ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗ ಬೇಕೆಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಚರ್ಚಿಸಲು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆಯಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಸ್ಥಳೀಯ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ರಸ್ತೆ ಮೇಲೆ ಬೀಳುವ ಮರಗಳನ್ನು ತಕ್ಷಣಕ್ಕೆ ಸ್ಪಂದಿಸಿ, ತೆರವುಗೊಳಿಸಲು ಸನ್ನದ್ಧರಾಗಿರಬೇಕು. ಗಾಳಿ-ಮಳೆಯಿಂದ ಮರಗಳು ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಲ್ಲಿ ತಕ್ಷಣವೇ ಪುರ್ನ ಸಂಪರ್ಕ ಕಲ್ಪಿಸುವ ವ್ಯವಸ್ಥೆಯನ್ನು ಮೆಸ್ಕಾಂ ಅಧಿಕಾರಿಗಳು ಕೈಗೊಳ್ಳಬೇಕು ಎಂದರು.

ನೋಡೆಲ್ ಅಧಿಕಾರಿ ನೇಮಕ

ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ತೋಡುಗಳನ್ನು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವಂತೆ ನೋಡಿಕೊ ಳ್ಳಬೇಕು. ಅತಿವೃಷ್ಠಿ ಸಂಭವಿಸಿದಾಗ ತುರ್ತು ವಿಪತ್ತು ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಅವರು ಸೂಚನೆ ನೀಡಿದರು.

ನಗರ ವ್ಯಾಪ್ತಿಯ ಪ್ರತಿಯೊಂದು ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಕಂಟ್ರೋಲ್ ರೂಂಗಳನ್ನು ದಿನದ 24 ತೆರೆಯುವುದರ ಜೊತೆಗೆ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳನ್ನು ನೇಮಕ ಮಾಡಿ, ತಾಲೂಕು ಕಚೇರಿ ಯೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು. ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿರಂತರವಾಗಿ ಮಾಡಬೇಕು. ಒಂದೊಮ್ಮೆ ಕಲುಷಿತ ನೀರು ಕಂಡುಬಂದಲ್ಲಿ ಪುನಶ್ಚೇತನಗೊಳಿಸುವ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ರೋಗ ಹರಡದಂತೆ ಕ್ರಮ

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕು. ಕಾಯಿಲೆಗಳಿಗೆ ಬೇಕಾಗುವ ಔಷಧ, ಚುಚ್ಚುಮದ್ದುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆಯ ಕಂಟ್ರೋಲ್ ರೂಂಗಳು ದಿನ ಪೂರ್ತಿ ಸಕ್ರೀಯವಾಗಿರಬೇಕು. ಡೆಂಗ್ಯೂ, ಮಲೇರಿಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಬೇಕು ಎಂದು ಡಿಸಿ ತಿಳಿಸಿದರು.

ರಸ್ತೆ ಬದಿಯಲ್ಲಿ ಅನುಮತಿ ಪಡೆಯದೇ ಹಾಕಿರುವ ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯವನ್ನು ಆದ್ಯತೆಯ ಮೇಲೆ ಮಾಡಬೇಕು. ಪಿ.ಡಿ.ಓಗಳು ತಮ್ಮ ಗ್ರಾಮಗಳಲ್ಲಿ ಇರುವ ತೆರೆದ ಕೆರೆಗಳ ಮತ್ತು ನೀರಿನ ಗುಂಡಿಗಳ ಸುತ್ತ ತಡೆಬೇಲಿಗಳನ್ನು ಹಾಕುವುದರೊಂದಿಗೆ ಎಚ್ಚರಿಕೆಯ ಫಲಕಗಳನ್ನು ಅಳವಡಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ದುರಸ್ಥಿಯ ಕೆಲಸಗಳನ್ನು ಆದ್ಯತೆಯ ಮೇಲೆ ಕೈಗೊಳ್ಳ ಬೇಕು. ಮಳೆಗಾಲದ ತುರ್ತು ಸಂದರ್ಭಗಳಲ್ಲಿ ಅಗತ್ಯವಿದ್ದಾಗ ಕಾಳಜಿ ಕೇಂದ್ರಗಳನ್ನು ತೆರೆಯಲು ಸೂಕ್ತ ಶಾಲಾ ಕಟ್ಟಡವನ್ನು ಸಿದ್ಧವಾಗಿಟ್ಟುಕೊಂಡಿರಬೇಕು ಎಂದು ಅವರು ತಿಳಿಸಿದರು.

ಈಜಾಟ ನಿಷೇಧ ಫಲಕ

ಜಿಲ್ಲೆಯಲ್ಲಿ ಈ ಹಿಂದೆ ಹೆಚ್ಚಿನ ಪ್ರವಾಹವಾಗಿರುವ ಸ್ಥಳಗಳನ್ನು ಗುರುತಿಸಿ, ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕುಗಳಲ್ಲಿ ಲಭ್ಯವಿರುವ ಬೋಟುಗಳು ಮತ್ತು ಈಜುಗಾರರ ಸಂಪೂರ್ಣ ಮಾಹಿತಿಯನ್ನು ಪಡೆಯುವುದರೊಂದಿಗೆ ತುರ್ತು ಸಂದರ್ಭಗಳಲ್ಲಿ ಇವರುಗಳನ್ನು ಬಳಸಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಗಣಿಗಾರಿಕೆ ನಡೆದ ಪ್ರದೇಶದಲ್ಲಿ ಆಗಿರುವ ಗುಂಡಿಗಳಲ್ಲಿ ನಿಂತ ನೀರಿನಲ್ಲಿ ಈಜಾಡಲು ಹೋಗುವುದ ರಿಂದ ಜೀವಹಾನಿ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆ, ಈಜಾಟ ನಿಷೇಧಿಸಿದೆ ಎಂಬ ಎಚ್ಚರಿಕೆಯ ಫಲಕವನ್ನು ಹಾಕಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಇರುವ ಕಾಲುಸಂಕಗಳ ಸ್ಥಿತಿ-ಗತಿಗಳ ಪರಿಶೀಲನೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕಗಳ ದುರಸ್ಥಿ ಕಾರ್ಯಗಳನ್ನು ಮಾಡಬೇಕು ಎಂದ ಅವರು ಅಪಾಯಕಾರಿ ಕಾಲುಸಂಕಗಳಿದ್ದಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು.

ಜೀವಹಾನಿ ತಡೆ

ಮಳೆಗಾಲದಲ್ಲಿ ಗುಡುಗು-ಸಿಡಿಲು ಸಂದರ್ಭದಲ್ಲಿ ಹವಾಮಾನ ಇಲಾಖೆ ನೀಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರೊಂದಿಗೆ ಯಾವುದೇ ಮಾನವ ಹಾಗೂ ಪ್ರಾಣಿಗಳ ಜೀವ ಹಾನಿ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಹೊರರಾಜ್ಯದ ಕಾರ್ಮಿಕರುಗಳು ಹೆಚ್ಚಾಗಿ ದುಡಿಯುತ್ತಿರುವುದ ರಿಂದ ಅವರುಗಳ ಭಾಷೆಯಲ್ಲಿ ಗುಡುಗು-ಸಿಡಿಲಿನ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಡಿಸಿ ಹೇಳಿದರು.

ಜಿಲ್ಲೆಯ ಕರಾವಳಿ ತೀರದಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದದ ಸಮುದ್ರ ಕೊರೆತಕ್ಕೆ ಸಂಬಂಧಿಸಿದಂತೆ, ಸಮುದ್ರ ಕೊರೆತ ತಡೆಗಟ್ಟುವಿಕೆ ನಿರ್ವಹಣಾ ಸಮಿತಿಯನ್ನು ರಚಿಸುವುದರೊಂದಿಗೆ ಸದ್ರಿ ಸಮಿತಿಯ ಅಧಿಕಾರಿಗಳು ಸಮುದ್ರ ಕೊರೆತ ಸಂಭವಿಸುವ ಪ್ರದೇಶಗಳ ಸ್ಥಳ ಪರಿಶೀಲನೆ ನಡೆಸಿ, ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಮೊದಲಾದವರು ಉಪಸ್ಥಿತರಿದ್ದರು.

ಟಾಸ್ಕ್‌ಫೋರ್ಸ್ ತಂಡ ರಚನೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಮಾನ್ಸೂನ್ ಟಾಸ್ಕ್‌ ಫೋರ್ಸ್ ತಂಡಗಳನ್ನು ರಚಿಸಿ, ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.

ಕುಂದು ಕೊರತೆಗಳನ್ನು ಮಾಹಿತಿ ನೀಡಲು ತುರ್ತು ಸಂಪರ್ಕ ದೂರವಾಣಿಯನ್ನು ಸ್ಥಾಪಿಸಿ, ಈ ಬಗ್ಗೆ ಪ್ರಚಾರ ಪಡಿಸಬೇಕು. ಹೆದ್ದಾರಿಗಳಿಗೆ ಅಡ್ಡಲಾಗಿ ಬಿದ್ದಂತಹ ಮರಗಳನ್ನು ತುರ್ತು ಕಾರ್ಯಾಚರಣೆ ಕೈಗೊಂಡು ತೆರವುಗೊಳಿಸುವ ಕಾರ್ಯವನ್ನು ಮಾಡಬೇಕೆಂದು ಅವರು ಸೂಚನೆ ನೀಡಿದರು.

ಮರವಂತೆ ಬೀಚಿನ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ನಿಲುಗಡೆಯಿಂದ ಅಪಘಾತಗಳು ಉಂಟಾಗುತ್ತಿವೆ. ಈ ಬಗ್ಗೆ ವಾಹನಗಳ ನಿಲುಗಡೆ ಇಲ್ಲವೆಂಬ ಫಲಕಗಳನ್ನು ಅಳವಡಿಸಬೇಕು ಹಾಗೂ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳ ತೆರವಿಗೆ ಕ್ರಮವಹಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X