Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಘನತ್ಯಾಜ್ಯ ವಸ್ತುಗಳ ವಿಲೇವಾರಿ...

ಘನತ್ಯಾಜ್ಯ ವಸ್ತುಗಳ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಉಡುಪಿ ಡಿಸಿ ಸ್ವರೂಪ ಟಿ.ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 May 2026 9:35 PM IST
share
ಘನತ್ಯಾಜ್ಯ ವಸ್ತುಗಳ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಉಡುಪಿ ಡಿಸಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ, ಮೇ 21: ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಘನ ತ್ಯಾಜ್ಯವಸ್ತುಗಳನ್ನು ಮೂಲದಲ್ಲಿಯೇ ವಿಂಗಡಣೆ ಮಾಡಿ, ಸಂಗ್ರಹಣೆ, ಸಾಗಾಣಿಕೆ, ಸಂಸ್ಕರಣೆ ಹಾಗೂ ಅವುಗಳ ವಿಲೇವಾರಿ ಯನ್ನು ವೈಜ್ಞಾನಿಕ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ.

ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಘನತ್ಯಾಜ್ಯ ನಿರ್ವಹಣೆ - ನಿಯಮಗಳು 2026 ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ವಿಶೇಷ ಸೆಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಘನ ತ್ಯಾಜ್ಯಗಳನ್ನು ನಿರ್ಲಕ್ಷಿಸುವುದರಿಂದ ಆರ್ಥಿಕತೆ ಅಷ್ಟೇ ಅಲ್ಲದೇ ಆರೋಗ್ಯದ ಮೇಲೆಯೂ ಪರಿಣಾಮ ಬೀರು ತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಮನುಷ್ಯ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯಗಳನ್ನು ಮೂಲದಲ್ಲಿಯೇ ನಾಲ್ಕು ವಿಧದ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ (ಬಲ್ಬ್‌ಗಳು, ಬ್ಯಾಟರಿ, ಅವಧಿ ಮೀರಿದ ಔಷಧಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆ ಯನ್ನು ಸಾರ್ವಜನಿಕರಿಂದ ಮಾಡಿಸಿ, ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರಿಗೆ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯನ್ನು ಉತ್ತೇಜಿಸಲು ಹಾಗೂ ಎಲ್ಲಾ ತ್ಯಾಜ್ಯ ಉತ್ಪಾದಕರಲ್ಲಿ ಅರಿವು ಮೂಡಿಸಲು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿ ಗಳನ್ನು ಮುಖ್ಯ ಮಾರ್ಗದರ್ಶಕರನ್ನಾಗಿ ನೇಮಕ ಮಾಡಿಕೊಂಡು ಸ್ವಯಂ ಸೇವಕರು, ಸಂಘ-ಸಂಸ್ಥೆಗಳ ಸಹಭಾಗಿತ್ವ ದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮದ ಅನ್ವಯ ಬೃಹತ್ ತ್ಯಾಜ್ಯ ಉತ್ಪಾದಕರನ್ನು ಗುರುತಿಸಿ, ನೋಂದಾಯಿಸಿ ಕೊಳ್ಳಬೇಕು. ಅಲ್ಲಿ ಉತ್ಪಾದನೆಯಾದ ತ್ಯಾಜ್ಯವನ್ನು ಸ್ಥಳದಲ್ಲಿಯೇ ಸಂಸ್ಕರಿಸ ಬೇಕು. ತ್ಯಾಜ್ಯ ಸಂಸ್ಕರಣಾ ಸೌಲಭ್ಯ ಲಭ್ಯವಿಲ್ಲದಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಉತ್ಪಾದಕರಿಂದ ವಿಂಗಡಿತ ತ್ಯಾಜ್ಯವನ್ನು ಸ್ವೀಕರಿಸಬೇಕು. ಅವರಿಂದ ಬೈಲಾ ಪ್ರಕಾರ ನಿಗದಿಪಡಿಸಿದ ಶುಲ್ಕ ವಸೂಲಿ ಮಾಡಿ ಪ್ರಮಾಣ ಪತ್ರವನ್ನು ನೀಡಬೇಕು ಎಂದರು.

ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಸ್ಪೆಷಲ್ ಕೇರ್ ವೇಸ್ಟೇಜ್ ಅನ್ನು ಸಮರ್ಪಕವಾಗಿ ಸಂಗ್ರಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಈ ಉದ್ದೇಶಕ್ಕೆ ಪ್ರತಿ ಐದು ಚದರ ಕಿ.ಮೀ. ಪ್ರದೇಶಕ್ಕೆ ಕನಿಷ್ಟ ಒಂದು ಸಂಗ್ರಹಣಾ ಕೇಂದ್ರ ವನ್ನು ಸ್ಥಾಪಿಸಬೇಕು ಹಾಗೂ ಇಲ್ಲಿ ಸ್ವೀಕರಿಸುವ ಸಮಯವನ್ನು ಅಧಿಕೃತವಾಗಿ ಪ್ರಕಟಿಸಬೇಕು ಎಂದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಗಳ ಸ್ವಚ್ಛತೆಯನ್ನು ನಿಯಮಿತ ವಾಗಿ ಕೈಗೊಳ್ಳಬೇಕು ಹಾಗೂ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಿ, ಅವು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಕಸಗಳನ್ನು ಎಲ್ಲೆಂದರಲ್ಲಿ ಎಸೆದರೆ ಅವರಿಂದ ದಂಡ ವಸೂಲಿ ಮಾಡಬೇಕು. ಈ ಸಂಬಂಧ ಅಗತ್ಯವಿರುವ ಕಡೆ ಸಿಸಿಟಿವಿ ಗಳನ್ನು ಅಳವಡಿಸಬೇಕು ಎಂದರು.

ಸ್ಥಳೀಯ ಸಂಸ್ಥೆಗಳು ಪ್ರತ್ಯೇಕವಾಗಿ ಸಂಗ್ರಹಿಸಿದ ಒಣ ತ್ಯಾಜ್ಯವನ್ನು ಎಂ.ಆರ್.ಎಫ್ ಘಟಕಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳು, ಮರುಬಳಕೆ ಮಾಡಲಾಗದ ವಸ್ತುಗಳು, ದಹನಕಾರಿ ತ್ಯಾಜ್ಯ, ನಿಷ್ಕೃಿಯ ತ್ಯಾಜ್ಯಗಳು ಎಂದು ಮರು ವಿಂಗಡಣೆ ಮಾಡಿ, ನಿಯಮಾನುಸಾರ ವಿಲೇವಾರಿ ಮಾಡಬೇಕು. ನಾಗರಿಕರು ಬಳಸಿದ ವಸ್ತುಗಳು, ಬಟ್ಟೆಗಳು, ಎಲೆಕ್ಟ್ರಾನಿಕ್ ಉತ್ಪನ್ನಗಳು, ಪುಸ್ತಕಗಳು ಸೇರಿದಂತೆ ವಿವಿಧಜ ವಸ್ತುಗಳನ್ನು ದಾನ ಮಾಡಲು ಆರ್.ಆರ್.ಆರ್ ಘಟಕಗಳನ್ನು ಸ್ಥಾಪಿಸಬೇಕು ಎಂದರು.

ಘನತ್ಯಾಜ್ಯಗಳ ನಿರ್ವಹಣೆಯ ಸಮರ್ಪಕ ಅನುಷ್ಠಾನ ಕುರಿತು ಪ್ರತೀ ವಾರ್ಡ್‌ಗೆ ಒಬ್ಬರನ್ನು ನೋಡೆಲ್ ಅಧಿಕಾರಿ ಗಳನ್ನು ನೇಮಕ ಮಾಡಬೇಕು ಎಂದ ಸ್ವರೂಪ ಟಿ.ಕೆ., ದ್ವಿತೀಯ ಹಂತದಲ್ಲಿ ತ್ಯಾಜ್ಯ ಸಾಗಾಣಿಕೆಗೆ ಸಂಪೂರ್ಣ ಮುಚ್ಚಿದ ವಾಹನಗಳನ್ನು ಬಳಸುವಂತೆ ವ್ಯವಸ್ಥೆ ಮಾಡಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X