Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹಕಾರಿ ಕ್ಷೇತ್ರ ಜನರ ಬೆಳವಣಿಗೆಯ ಭಾಗ:...

ಸಹಕಾರಿ ಕ್ಷೇತ್ರ ಜನರ ಬೆಳವಣಿಗೆಯ ಭಾಗ: ಡಾ. ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ22 May 2026 6:49 PM IST
share
ಸಹಕಾರಿ ಕ್ಷೇತ್ರ ಜನರ ಬೆಳವಣಿಗೆಯ ಭಾಗ: ಡಾ. ರಾಜೇಂದ್ರ ಕುಮಾರ್
ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಕುಂದಾಪುರ ಶಾಖೆ ಉದ್ಘಾಟನೆ

ಕುಂದಾಪುರ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಬ್ಯಾಂಕುಗಳು ವಿಲೀನಗೊಂಡು ಬ್ಯಾಂಕ್ ಹೆಸರೇ ಇಲ್ಲವಾಗಿದೆ. ಪ್ರಸ್ತುತ ದೇಶದಲ್ಲಿಯೇ ಸಹಕಾರಿ ಸಂಘಗಳು ಜನರಿಗೆ ಬೇಕಾದ ಸೇವೆ ನೀಡುವಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದೆ. ಸಹಕಾರಿ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಗೆ ವಿಶೇಷ ಸ್ಥಾನವಿದೆ. ಜನರ ಬೆಳವಣಿಗೆಯ ಒಂದು ಭಾಗವಾಗಿ ಸಹಕಾರಿ ಕ್ಷೇತ್ರ ಬೆಳೆಯುತ್ತಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ ಇದರ ಕುಂದಾಪುರದ ಸಂಪೂರ್ಣ ಹವಾನಿಯಂತ್ರಿತ 12ನೇ ಶಾಖೆಯನ್ನು ಕುಂದಾಪುರದ ಮುಖ್ಯ ರಸ್ತೆಯ ಪಾರಿಜಾತ ಹೋಟೆಲ್ ಬಳಿಯ ಶ್ರೀ ನಂದಿಕೇಶ್ವರ ಟವರ್ಸ್‌ನಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಂಸ್ಥೆಯನ್ನು ಹುಟ್ಟು ಹಾಕುವುದು ಸುಲಭ, ಆದರೆ ಅದನ್ನು ಲಾಭದಲ್ಲಿ ಮುನ್ನಡೆಸುವುದು ಸವಾಲು. ಸಹಕಾರಿ ಸಂಸ್ಥೆ ಬೆಳೆಯಬೇಕಾದರೆ ಸಿಬ್ಬಂದಿಗಳ ಕಾರ್ಯವೈಖರಿಯೂ ಪ್ರಮುಖವಾಗಿದೆ. ಸಿಬ್ಬಂದಿಗಳು ಜನಸ್ನೇಹಿಯಾಗಿ ಉತ್ತಮ ಕೆಲಸ ಮಾಡಿದರೆ ಸಂಸ್ಥೆಗಳು ಬೆಳೆಯುತ್ತದೆ. ನೂರು ವರ್ಷಗಳ ಇತಿಹಾಸವಿರುವ ಬಡಗುಬೆಟ್ಟು ಸೊಸೈಟಿಯು ಜನರ ಹತ್ತಿರಕ್ಕೆ, ಲಾಭದಾಯಕ ಮಟ್ಟಿಗೆ ಬೆಳೆದಿರುವುದು 35 ವರ್ಷಗಳಿಂದ. ಇದರ ಹಿಂದೆ ಇಡೀ ತಂಡದ ಪರಿಶ್ರಮ‌ವಿದೆ. ಬಂದ ಲಾಭದಲ್ಲಿ ಒಂದು ಭಾಗವನ್ನು ಸಾಮಾಜಿಕ ಕೈಂಕರ್ಯಕ್ಕೆ ವಿನಿಯೋಗಿಸುತ್ತಿರುವುದು ಶ್ಲಾಘನೀಯ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನಸಾಮಾನ್ಯರ ಬದುಕಿನ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಮಾಡುವಂತಹ ಏಕೈಕ ವ್ಯವಸ್ಥೆಯಾಗಿ ಸಹಕಾರಿ ಸಂಸ್ಥೆಗಳು ಬೆಳೆದು ಬಂದಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಅತ್ಯಂತ ಎತ್ತರದ ಸ್ಥಾನದಲ್ಲಿರುವ ಸೊಸೈಟಿಗಳಲ್ಲಿ ಬಡಗಬೆಟ್ಟು ಸೊಸೈಟಿ ಒಂದಾಗಿದೆ ಎಂದು ತಿಳಿಸಿದರು.

ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸಹಕಾರಿ ಸಂಘಗಳು ವಾಣಿಜ್ಯ ಬ್ಯಾಂಕ್‌ಗಳಿಗೆ ಸಮಾನಂತರವಾಗಿ ಬೆಳೆಯುತ್ತಿದೆ. ಗ್ರಾಮೀಣ ಭಾಗದ ಜನರ ಕಷ್ಟ-ಸುಖಕ್ಕೆ ಶೀಘ್ರ ಸ್ಪಂದನೆ ನೀಡುವಲ್ಲಿ ಸಹಕಾರಿ ಸಂಘಗಳು ಮುಂಚೂಣಿ ಪಾತ್ರವಹಿಸಿ ತ್ವರಿತ ಸಾಲ ಸೌಲಭ್ಯ, ಉತ್ತಮ ಸೇವೆಯೊಂದಿಗೆ ಜನರ ವಿಶ್ವಾಸ ಪಡೆದಿದೆ ಎಂದರು.

ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಹಿಂದೆ ಸಹಕಾರಿ ಕ್ಷೇತ್ರಕ್ಕೆ ಒಂದು ವ್ಯಾಪ್ತಿಯ ಮಿತಿಯಿತ್ತು. ಈಗ ಅದು ಎಲ್ಲ ಕಡೆಗೆ ವಿಸ್ತರಣೆಗೊಂಡಿದೆ. ಸಹಕಾರಿ ಸಂಘಗಳು ಜನರಿಗೆ ಇನ್ನಷ್ಟು ಆಕರ್ಷಕ ಸೇವೆ ಒದಗಿಸ ಬೇಕು. ಸರಕಾರದ ಮಟ್ಟದಲ್ಲಿ ಚರ್ಚಿಸಿ, ಸಾಲದ ಬಡ್ಡಿದರ ಇಳಿಸಿದರೆ ಬಹಳಷ್ಟು ಜನರಿಗೆ ಸಹಕಾರಿಯಾಗಲಿದೆ. ಶಿಕ್ಷಣಕ್ಕೆ ಭದ್ರತೆ ರಹಿತ ಸಾಲ ಸೌಲಭ್ಯದಂತಹ ಸೇವೆ ಆರಂಭಿಸಬೇಕು. ಸಹಕಾರಿ ಸಂಘಗಳು ಕೂಡ ಜನರಿಗೆ ಸ್ವಲ್ಪ ಉದಾರತೆಯನ್ನು ತೋರಿಸಿದರೆ ರೈತರು, ಯುವ ಸಮೂಹಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತ ನಾಡಿ, 107 ವರ್ಷಗಳ ಇತಿಹಾಸದ ಈ ಸಂಘವು ಏಳು-ಬೀಳುಗಳನ್ನು ಮೂರ್ನಾಲ್ಕು ದಶಕಗಳಿಂದ ಲಾಭದಾಯಕ ರೀತಿಯಲ್ಲಿ ಮುನ್ನಡೆಯುತ್ತಾ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಪ್ರಸ್ತುತ 23 ಸಾವಿರ ಸದಸ್ಯರಿದ್ದು, 662 ಕೋಟಿ ರೂ. ಠೇವಣಿ, 528 ಕೋ.ರೂ. ಸದಸ್ಯರ ಹೊರಬಾಕಿ ಸಾಲ ಹೊಂದಿದೆ. 113.24 ಕೋ.ರೂ. ನಿಧಿ, 284.07 ಕೋ.ರೂ. ಹೂಡಿಕೆ, 795 ಕೋ.ರೂ. ದುಡಿಯುವ ಬಂಡವಾಳ, 2025-26 ನೇ ಸಾಲಿನಲ್ಲಿ 4062.29 ಕೋ.ರೂ. ವಾರ್ಷಿಕ ವಹಿವಾಟು ನಡೆಸಿ, 18.13 ಕೋ.ರೂ. ಲಾಭಗಳಿಸಿದ್ದು ಇದಕ್ಕೆ ಆಡಳಿತ ಮಂಡಳಿ ಮಾರ್ಗದರ್ಶನ, ಸಿಬ್ಬಂದಿ ಸಹಕಾರವೇ ಕಾರಣ ಎಂದರು.

ಇದೇ ಸಂದರ್ಭ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ನೂತನ ಶಾಖೆಯ ಪ್ರಥಮ ಗ್ರಾಹಕರಿಗೆ ಸಂಘದ ಖಾತೆಯ ಪಾಸ್‌ಬುಕ್ ಮತ್ತು ಠೇವಣಿ ಪತ್ರ ವಿತರಿಸಲಾಯಿತು. ಇಂಜಿನಿಯರ್ ಮುರಳೀಧರ ಶೆಟ್ಟಿ ಅವರನ್ನು ಗೌರವಿಸಿ, ಕಟ್ಟಡದ ಮಾಲಕರಾದ ಜಿ.ಸುರೇಶ ಮತ್ತು ಜಿ.ಉದಯ ಗೌರವಿಸಲಾಯಿತು.

ಉಡುಪಿ ಶಾಸಕ ಯಶಪಾಲ್ ಸುವರ್ಣ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಸಹಕಾರಿ ಉಪ ನಿಬಂಧಕಿ ಲಾವಣ್ಯ ಕೆ.ಆರ್., ಕುಂದಾಪುರ ಉಪವಿಭಾಗದ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ., ಸಂಘದ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್, ನಿರ್ದೇಶಕರುಗಳಾದ ಸಂಜೀವ ಕಾಂಚನ್, ಪುರುಷೋತ್ತಮ ಪಿ.ಶೆಟ್ಟಿ, ಎಲ್.ಉಮಾನಾಥ, ಸಾಧು ಸಾಲ್ಯಾನ್, ಪದ್ಮನಾಭ ಕೆ.ನಾಯಕ್, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಸದಾಶಿವ ನಾಯ್ಕ್, ಜಯ ಶೆಟ್ಟಿ, ಗಾಯತ್ರಿ ಎಸ್.ಭಟ್ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಶ್ರೀಧರ್ ಪಿ.ಎಸ್. ಹಾಗೂ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಶಾಖಾ ವ್ಯವಸ್ಥಾಪಕ ಸಮರ್ಥ್ ಶೆಟ್ಟಿ ವಂದಿಸಿದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X