ಉಡುಪಿ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

ಉಡುಪಿ, ಮೇ 25: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಇಂದು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ ಮಹಿಳೆಯರ, ಬಾಣಂತಿಯರ, ರೋಗಿಗಳ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Next Story




