Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೀಲಾವರದಲ್ಲಿ ಶ್ರೀವಿಶ್ವೇಶ ತೀರ್ಥ...

ನೀಲಾವರದಲ್ಲಿ ಶ್ರೀವಿಶ್ವೇಶ ತೀರ್ಥ ಸ್ಮತಿವನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 May 2026 9:53 PM IST
share
ನೀಲಾವರದಲ್ಲಿ ಶ್ರೀವಿಶ್ವೇಶ ತೀರ್ಥ ಸ್ಮತಿವನ ಉದ್ಘಾಟನೆ

ನೀಲಾವರ (ಬ್ರಹ್ಮಾವರ), ಮೇ 25: ಪೇಜಾವರ ಮಠದ ಪೀಠಾಧಿಪತಿ ಗಳಾಗಿದ್ದ ಕೀರ್ತಿಶೇಷ ಪೇಜಾವರಶ್ರೀಗಳು ತಮ್ಮ ಪ್ರಗತಿಪರ ಚಿಂತನೆಗಳಿಂದ ನಾಡಿನ ಜನರ ಮನಗೆದ್ದಿದ್ದರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಗೂ ಉಡುಪಿಯ ಶ್ರೀಪೇಜಾವರ ಮಠದ ಸಹಯೋಗದಲ್ಲಿ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಗೌರವಾರ್ಥ ನಿರ್ಮಿಸಲಾದ ‘ಸ್ಮತಿವನ’ ವನ್ನು ಉದ್ಘಾಟಿಸಿ, ಶ್ರೀವಿಶ್ವೇಶತೀರ್ಥರ ಪುತ್ಥಳಿಯನ್ನು ಅನಾವರಣಗೊಳಿಸಿ ಅವರು ಮಾತನಾಡುತಿದ್ದರು.

ಕಾಡು, ಮರ, ಪ್ರಕೃತಿ, ಪರಿಸರ ಸಂರಕ್ಷಣೆಗಾಗಿ ಶ್ರೀಗಳು ನೀಡಿರುವ ಕೊಡುಗೆ ಅಪಾರವಾದದ್ದು. ಅವರು ನಕ್ಸಲರ ಮನವೊಲಿಸುವ ಕಾರ್ಯವನ್ನೂ ಮಾಡಿದ್ದರು, ಶಾಂತಿಯನ್ನು ಪ್ರತಿಪಾದಿಸುತ್ತಿದ್ದರು ಎಂದು ಈಶ್ವರ ಖಂಡ್ರೆ ನೆನಪಿಸಿಕೊಂಡರು.

ಅನುದಾನದ ಭರವಸೆ: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ 33ನೇ ಯತಿಗಳಾಗಿದ್ದ ಶ್ರೀವಿಶ್ವೇಶ ತೀರ್ಥರ ಹೆಸರಿನ ಸ್ಮೃತಿವನ ಉದ್ಘಾಟಿಸುತ್ತಿರುವುದು ತಮ್ಮ ಸೌಭಾಗ್ಯ ಎಂದ ಅವರು, ನೀಲಾವರದ ಸ್ಮೃತಿವನದ ಸಮೀಪದಲ್ಲೇ 2 ಎಕರೆ ಪ್ರದೇಶದಲ್ಲಿ ಮತ್ತೊಂದು ವನ ನಿರ್ಮಿಸಲು ಮುಂದಾಗಿರುವ ಮಠಕ್ಕೆ 1 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದರು. ಇದೇ ವೇಳೆ ಆರು ತಿಂಗಳ ಹಿಂದೆ ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಸಿದ್ದಗಂಗಾಮಠದ ಡಾ. ಶ್ರೀಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲೂ ಸ್ಮೃತಿವನ ಉದ್ಘಾಟಿಸಿದ್ದನ್ನು ಸ್ಮರಿಸಿದರು.

ಪಶ್ಚಿಮಘಟ್ಟ ಸಂರಕ್ಷಣೆ ಎಲ್ಲರ ಹೊಣೆ: ಪ್ರಕೃತಿ ಪರಿಸರ ಉಳಿದರೆ ಮಾತ್ರ ಜಗತ್ತು ಉಳಿಯಲು ಸಾಧ್ಯವಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ಗಳನ್ನು ತಡೆದು ವ್ಯಾಪಕ ಮಳೆ ಸುರಿಸುತ್ತವೆ. ಇದು ಜೀವವೈವಿಧ್ಯದ 8ನೇ ನೆಚ್ಚಿನ ತಾಣವಾಗಿದ್ದು, ಹಲವು ಪ್ರಭೇದದ ಸಸ್ಯಸಂಕುಲ, ಕೀಟಸಂಕುಲ, ಜೀವಸಂಕುಲದ ತವರಾಗಿದೆ. ಇದನ್ನು ಸರ್ಕಾರ, ಅರಣ್ಯ ಇಲಾಖೆ ಮಾತ್ರ ರಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಪಶ್ಚಿಮ ಘಟ್ಟದ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಒತ್ತುವರಿ ತೆರವು: ತಾವು ಸಚಿವರಾದ ಬಳಿಕ ಬೆಂಗಳೂರಿನಲ್ಲಿ 10 ಸಾವಿರ ಕೋಟಿ ರೂ. ಬೆಲೆಬಾಳುವ 250 ಎಕರೆ ಸೇರಿದಂತೆ ಒಟ್ಟು 12500 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿರುವುದಾಗಿ ಹೇಳಿದ ಅವರು, 50 ಸಾವಿರ ಕೋಟಿ ಬೆಲೆ ಬಾಳುವ ಅರಣ್ಯ ಭೂಮಿಯ ಮರು ವಶಕ್ಕೆ ಕಾನೂನು ಹೋರಾಟ ಮಾಡುತ್ತಿರುವುದಾಗಿ ಹೇಳಿದರು.

ಬೆಂಗಳೂರು ನಗರದಲ್ಲಿ ಉಸಿರಾಡಲೂ ಕಷ್ಟವಾಗಬಾರದು ಎಂದು ತಾವು ಅರಣ್ಯ ಸಚಿವರಾದ ಬಳಿಕ ಬೆಂಗಳೂರು ಯಲಹಂಕ ಬಳಿ 153 ಎಕರೆ ಪ್ರದೇಶದಲ್ಲಿ ವಿಶ್ವಗುರು ಬಸವಣ್ಣ ಬೃಹತ್ ಜೈವಿಕ ಉದ್ಯಾನ ಅಭಿವೃದ್ಧಿ ಪಡಿಸಲು ಕ್ರಮವಹಿಸಿದ್ದು, ಇದಕ್ಕಾಗಿ 50 ಕೋಟಿ ರೂ. ತೆಗೆದಿರಿಸಲಾಗಿದೆ ಎಂದರು.

ಸಂಘರ್ಷ ತಡೆಗೆ ಕ್ರಮ: ರಾಜ್ಯದಲ್ಲಿ 6395 ಆನೆಗಳಿದ್ದು, ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ಆನೆ ಇರುವ ರಾಜ್ಯ ಕರ್ನಾಟಕವಾಗಿದೆ. ಅದೇ ರೀತಿ 563 ಹುಲಿಗಳೊಂದಿಗೆ ರಾಜ್ಯ ಹುಲಿಯನ್ನು ಹೊಂದಿರುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿದೆ. ಇದರ ಜೊತೆಗೆ ರಾಜ್ಯದಲ್ಲಿ ಮಾನವ-ಆನೆ ಸಂಘರ್ಷವೂ ಹೆಚ್ಚಾಗಿದೆ. ಹೀಗಾಗಿ ಈ ಸಂಘರ್ಷ ತಗ್ಗಿಸಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿರುವುದಾಗಿ ಹೇಳಿದರು.

ಮಹಾವನ ನಿರ್ಮಿಸಲು ಪೇಜಾವರ ಮಠ ಸಿದ್ಧ: ಸಮಾರಂಭದಲ್ಲಿ ಆಶೀವಚನ ನೀಡಿದ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ಪೇಜಾವರ ಶ್ರೀಗಳ ಸ್ಮೃತಿವನ ಸಾಕಾರಕ್ಕೆ ಸಹಕಾರ ನೀಡಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರನ್ನು ಅಭಿನಂದಿಸಿದರು.

2031 ಪೇಜಾವರ ಶ್ರೀಗಳ ಜನ್ಮ ಶತಮಾನೋತ್ಸವ ವರ್ಷವಾಗಿದ್ದು, ಅವರ ಹೆಸರಿನಲ್ಲಿ ಒಂದು ಮಹಾವನ ನಿರ್ಮಿಸುವ ಕನಸಿದೆ. ಸರಕಾರ ಒಂದು ಸಾವಿರ ಎಕರೆ ಬರಡು ಭೂಮಿ ನೀಡಿದರೂ ಮಹಾವನ ನಿರ್ಮಿಸಲು ಶ್ರೀಮಠ ಸಿದ್ಧ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ಮನೋಜ್ ತ್ರಿಪಾಠಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X