Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಳೆಯಿಂದ ಕಡಿತಗೊಂಡ ರಾಷ್ಟ್ರೀಯ ಹೆದ್ದಾರಿ...

ಮಳೆಯಿಂದ ಕಡಿತಗೊಂಡ ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ಸಂಸದ

ವಾರ್ತಾಭಾರತಿವಾರ್ತಾಭಾರತಿ29 May 2026 8:30 PM IST
share
ಮಳೆಯಿಂದ ಕಡಿತಗೊಂಡ ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ಸಂಸದ

ಬೈಂದೂರು, ಮೇ 29: ಕಳೆದ ರವಿವಾರ ಭಾರೀ ಮಳೆಯಿಂದಾಗಿ ಸಂಪರ್ಕ ಕಡಿತಗೊಂಡು, ತ್ವರಿತ ಕ್ರಮದಿಂದ ದುರಸ್ತಿ ನಡೆದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದ್ದ ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಸೂಕ್ಷ್ಮ ಪ್ರದೇಶಗಳಿಗೆ ಶುಕ್ರವಾರ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೈಂದೂರಿನಿಂದ ಕೊಲ್ಲೂರು ತನಕ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳನ್ನು ವೀಕ್ಷಿಸಿ, ಮುಂಬರುವ ದಿನಗಳಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಶ್ವತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಬೈಂದೂರಿನಿಂದ ಕೊಲ್ಲೂರು ದೇವಳದ ಮುಖಾಂತರ ಹೊಸನಗರ, ಶಿಕಾರಿಪುರ, ರಾಣಿಬೆನ್ನೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ- 766ಸಿಗೆ ಸುಮಾರು 400 ಕೋಟಿ ರೂ. ಮಂಜೂ ರಾಗಿದೆ. ಅರಣ್ಯ ಇಲಾಖೆಯ ಅನುಮತಿ ಸಹಿತ ಕೆಲವು ತಾಂತ್ರಿಕ ಕಾರಣಗಳಿಂದ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಇದೀಗ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಶೀಘ್ರವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.

ಇತ್ತೀಚೆಗೆ ಹೆದ್ದಾರಿ ಕುಸಿತಗೊಂಡು ಸಂಪರ್ಕಕ್ಕೆ ಸಮಸ್ಯೆಯಾಗಿದ್ದು ತಕ್ಷಣ ಸರಿಪಡಿಸಲಾಗಿತ್ತು. ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸಲು ಹಾಗೂ ಕ್ಷಿಪ್ರಗತಿಯಲ್ಲಿ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಮಂಡಲ ಅಧ್ಯಕ್ಷ ಅನಿತಾ, ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ, ದಿಶಾ ಸಮಿತಿ ಸದಸ್ಯ ರಮೇಶ್, ಮುಖಂಡರಾದ ಪ್ರಿಯದರ್ಶಿನಿ ದೇವಾಡಿಗ, ಶರತ್ ಶೆಟ್ಟಿ ಉಪ್ಪುಂದ, ಹಿಂದುಳಿದ ಮೋರ್ಚಾ ಅಧ್ಯಕ್ಷ ಶಿವರಾಜ ಪೂಜಾರಿ, ಗೋಳಿಹೊಳೆ ಗ್ರಾ.ಪಂ ಮಾಜಿ ಅಧ್ಯಕ್ಷ ಮಂಜಯ್ಯ ಪೂಜಾರಿ, ಸುರೇಶ ಭಟವಾಡಿ, ಪುಷ್ಪರಾಜ ಶೆಟ್ಟಿ ಅಲ್ಲದೇ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X