Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್ ಬಹುಸಂಖ್ಯಾತರ ಸಂವಿಧಾನಿಕ...

ಎಸ್‌ಐಆರ್ ಬಹುಸಂಖ್ಯಾತರ ಸಂವಿಧಾನಿಕ ಹಕ್ಕು ಕಿತ್ತುಕೊಳ್ಳುವ ಕುತಂತ್ರ: ಪ್ರೊ.ಫಣಿರಾಜ್

ವಾರ್ತಾಭಾರತಿವಾರ್ತಾಭಾರತಿ30 May 2026 8:27 PM IST
share
ಎಸ್‌ಐಆರ್ ಬಹುಸಂಖ್ಯಾತರ ಸಂವಿಧಾನಿಕ ಹಕ್ಕು ಕಿತ್ತುಕೊಳ್ಳುವ ಕುತಂತ್ರ: ಪ್ರೊ.ಫಣಿರಾಜ್
ಕರ್ನಾಟಕದಲ್ಲಿ ಎಸ್‌ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಧರಣಿ

ಉಡುಪಿ, ಮೇ 30: ಎಸ್‌ಐಆರ್ ಎಂಬುದು ಕೇವಲ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಾಗಿ ಉಳಿದಿಲ್ಲ. ಅದನ್ನು ದೇಶದ ಬಹುಸಂಖ್ಯಾತರ ನಾಗರಿಕರ ಹಕ್ಕು, ಪೌರತ್ವ, ಸಂವಿಧಾನಿಕ ಹಕ್ಕುಗಳನ್ನು ಕಿತ್ತು ಕೊಳ್ಳುವ ಕುತಂತ್ರದ ಭಾಗವಾಗಿ ಜಾರಿಗೆ ತರಲಾಗುತ್ತಿದೆ ಎಂದು ಹಿರಿಯ ಚಿಂತಕ ಪ್ರೊ.ಫಣಿರಾಜ್ ಆರೋಪಿಸಿದ್ದಾರೆ.

ಎಸ್‌ಐಆರ್ ವಿರೋಧಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಉಡುಪಿ ಇದರ ನೇತೃತ್ವದಲ್ಲಿ ಎಸ್‌ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಶನಿವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಹಮ್ಮಿಕೊಳ್ಳಲಾದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಚುನಾವಣಾ ಆಯೋಗದ ಅಧಿಕಾರ ಮತದಾರ ಪಟ್ಟಿಯನ್ನು ತಯಾರಿಸು ವುದೇ ಹೊರತು ಭಾರತದ ಮತದಾರರ ಪೌರತ್ವ ಪಶ್ನೆ ಮಾಡುವುದು ಅಲ್ಲ. ಎಸ್‌ಐಆರ್ ಬಗ್ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಭಾರತದ 90ಕೋಟಿ ಜನರ ಪೌರತ್ವವನ್ನು ಕಟಕಟೆಯನ್ನು ನಿಲ್ಲಿಸಿದೆ. ಇದು ಜನವಿರೋಧಿ ತೀರ್ಪು ಆಗಿದೆ. ಶಾಸಕಾಂಗ, ಚುನಾವಣಾ ಆಯೋಗ ಸಂವಿಧಾನ ವಿರೋಧಿ ಯಾದರೆ, ಸುಪ್ರೀಂ ಕೋರ್ಟ್ ಜನರ ಪರ ಮಾತನಾಡಿ ದ್ದರೆ ಸಂವಿಧಾನ ವನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಹಾಗಾಗಿ ಬೀದಿಗೆ ಇಳಿಯುವುದು ಅನಿವಾರ್ಯವಾಗಿದೆ ಎಂದರು.

ಎನ್‌ಆರ್‌ಸಿಯನ್ನು ಹಿಂಬಾಗಿಲಿನಿಂದ ನುಗ್ಗಿಸಿ ಎಸ್‌ಐಆರ್ ಪ್ರತ್ರಿಯೆ ತರಲಾಗಿದೆ. ಮೇಲ್ನೋಟಕ್ಕೆ ಇದು ಮತದಾ ರರ ಪಟ್ಟಿಯ ಸಮಗ್ರ ಪರಿಷ್ಕರಣೆಯಂತೆ ಕಂಡರೂ ಅದರ ಮೂಲ ಉದ್ದೇಶ ಪೌರತ್ವ ಸಾಬೀತು ಪಡಿಸುವ ಹುನ್ನಾರದ ಭಾಗವಾಗಿದೆ. ಇದು ನಮ್ಮ ಮಾಡುವ ಇಲ್ಲವೇ ಮಡಿ ಹೋರಾಟ. ಯಾಕೆಂದರೆ ಕರ್ನಾಟಕದಲ್ಲಿ ಎಸ್‌ಐಆರ್‌ನ್ನು ರದ್ದುಗೊಳಿಸ ಬೇಕು ಎಂದು ಅವರು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಇದ್ರೀಸ್ ಹೂಡೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅಧಿಕಾರಿ ಎಂಬುದು ಸುಪ್ರೀಂ. ಇಂದು ಅದನ್ನು ನಿರಾಕರಿಸುವ ಹುನ್ನಾರ ನಡೆಸಲಾಗುತ್ತಿದೆ. ಚುನಾವಣಾ ಆಯೋಗವನ್ನು ಬಲಹೀನವನ್ನಾಗಿಸಲಾಗುತ್ತಿದೆ. ಆಯೋಗ ಒಂದು ಪಕ್ಷವನ್ನು ಸಮರ್ಥಿಸಿ ಕೊಂಡು, ಅವರ ಪ್ರಣಾಳಿಕೆಗೆ ಅನುಗುಣವಾಗಿ ನಡೆದುಕೊಳ್ಳುತ್ತಿದೆ. ಎಸ್‌ಐಆರ್ ಮೂಲಕ ಮತದಾರರ ಅಧಿಕಾರವನ್ನು ಕಿತ್ತುಕೊಳ್ಳುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಎಸ್‌ಡಿಪಿಐ ಮುಖಂಡ ಶಾಹೀದ್ ಅಲಿ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿದರು. ಬಳಿಕ ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಧರಣಿಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಸಿಐಟಿಯು ಮುಖಂಡರಾದ ಕವಿರಾಜ್, ಬಲ್ಕೀಸ್, ವಿವಿಧ ಸಂಘಟನೆಗಳ ಪ್ರಮುಖರಾದ ಹನೀಫ್ ಮೂಳೂರು, ವಾಲ್ಟರ್ ಪಿಂಟೋ, ಆಲ್ವಿನ್ ನೋರನ್ಹಾ, ಜಾಯಿಸ್ ಡೇಸಾ, ಶಾರದಾ ಮೂಡಸಗ್ರಿ, ಜಫರುಲ್ಲಾ, ಇಕ್ಬಾಲ್ ಮನ್ನಾ, ಹುಸೇನ ಕೋಡಿಬೆಂಗ್ರೆ ಮೊದಲಾದವರು ಉಪಸ್ಥಿತರಿದ್ದರು.

‘ಎಸ್‌ಐಆರ್ ತಡೆಯುವಂತೆ ದಾವೆ ಹೂಡಿ’

ರಾಜ್ಯ ಸರಕಾರ ತಕ್ಷಣವೇ ಎಲ್ಲ ಮತದಾರರ ಅರ್ಹತೆ ಸಾಬೀತು ಪಡಿಸುವ ಕಾಗದ ಪತ್ರಗಳನ್ನು ಒದಗಿಸುವ ಕಾರ್ಯಸಾಧ್ಯ ಸಮಯದ ವರೆಗೆ ಎಸ್‌ಐಆರ್ ಪ್ರಕ್ರಿಯೆ ತಡೆಯುವಂತೆ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಬೇಕು.

ಅರ್ಹ ಮತದಾರರಿಗೆ ಅಗತ್ಯವಾದ ಅಧಿಕೃತ ಕಾಗದ ಪತ್ರವನ್ನು ಒದಗಿಸುವುದಕ್ಕೆ ಶೀಘ್ರ ಸಕ್ಷಮ ಕ್ರಮ ಕೈಗೊಳ್ಳ ಬೇಕು. ಎಲ್ಲ ಜಿಲ್ಲೆಗಳಲ್ಲಿ ಅಗತ್ಯ ಇರುವಷ್ಟು ಸಂಖ್ಯೆಯಲ್ಲಿ ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ ಅರ್ಹ ಮತದಾರರಿಗೆ ಸಹಾಯ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶಿಸ ಬೇಕು. ಪ್ರಸ್ತುತ ಎಸ್‌ಐಆರ್ ಪ್ರತ್ರಿಯೆ ಭಾಗವಾಗಿ ರುವ ತಾರ್ಕಿಕವಾಗಿ ತಾಳೆಯಾಗದಿರುವಿಕೆ ನಡಾವಳಿಗಳನ್ನು ಕೈ ಬಿಡುವಂತೆ ಆಗ್ರಹಿಸಬೇಕು ಎಂಬ ಬೇಡಿಕೆಗಳನ್ನು ಎಸ್‌ಐಆರ್ ವಿರೋಧಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಉಡುಪಿ ಮನವಿಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X