ಮನೆ ನಿರ್ಮಾಣಕ್ಕೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಮೇ 30:ಕರ್ನಾಟಕ ಪ.ಜಾತಿ ಮತ್ತು ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವತಿಯಿಂದ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಕಲ್ಯಾಣಕ್ಕಾಗಿ ಸ್ವಂತ ನಿವೇಶನ ಹೊಂದಿರುವ ಪ.ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಮನೆ ನಿರ್ಮಾಣಕ್ಕಾಗಿ ವಸತಿ ಯೋಜನೆಯಡಿ 2 ಲಕ್ಷ ರೂ. ಸಹಾಯಧನ ಮಂಜೂರು ಮಾಡಲು ಅರ್ಹ ಫಲಾನುಭವಿಗಳಿಂದ ನಿಗದಿತ ನಮೂನೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ನಿವೇಶನ ಹೊಂದಿರುವ ಬಗ್ಗೆ ಹಕ್ಕುಪತ್ರ/ ಪೂರಕ ದಾಖಲಾತಿ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್‌ಬುಕ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ಮೊ.ನಂ: 9480843209, ಕುಂದಾಪುರ ಮೊ.ನಂ: 9480843208 ಹಾಗೂ ಕಾರ್ಕಳ ಮೊ.ನಂ: 9480843207 ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.




