ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಶಂಕರನಾರಾಯಣ, ಮೇ 31: ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೆಳ್ವೆ ಗ್ರಾಮದ ಪದ್ದು ಕುಂಬಾರ(75) ಎಂದು ಗುರುತಿಸ ಲಾಗಿದೆ. ಇವರು ಮೇ 27ರಂದು ಮನೆಯ ತೋಟದಲ್ಲಿರುವ ಬಾವಿಯ ಕೆಸರನ್ನು ತೆಗೆಯಲು ಬಾವಿಗೆ ಇಳಿದಿದ್ದು, ಕೆಲಸ ಮುಗಿಸಿ, ಹಗ್ಗದ ಸಹಾಯದಿಂದ ಮೇಲಕ್ಕೆ ಬರುವಾಗ ಆಕಸ್ಮಿಕವಾಗಿ ಕೈಜಾರಿ ಬಾವಿಗೆ ಬಿದ್ದರೆನ್ನ ಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅವರು, ಮೇ 30ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




