ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜೂ.3: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ 13 ವೈದ್ಯಾಧಿಕಾರಿಗಳ ಹಾಗೂ 04 ಪಿಹೆಚ್‌ಸಿಒ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನ ವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Next Story




