ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಉಡುಪಿ, ಜೂ.3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಎದುರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಡಿ.ಕೆ. ಶಿವಕುಮಾರ್ ಪರವಾಗಿ ಘೋಷಣೆ ಕೂಗಿ ಜೈಕಾರ ಹಾಕಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸುರೇಶ್ ಶೆಟ್ಟಿ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಜ್ಯೋತಿ ಹೆಬ್ಬಾರ್ ಮೊದಲಾದವರು ಇದ್ದರು.
ಕಿನ್ನಿಮೂಲ್ಕಿಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರಗಳನ್ನು ಕೂಗಿ ಸಂಭ್ರಮಿಸಿದರು. ನೂತನ ಮುಖ್ಯಮಂತ್ರಿಗೆ ಶುಭಾಶಯಗಳನ್ನು ಕೋರಿ ಪರಸ್ಪರ ಸಿಹಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದರು.
Next Story




