ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

ಕೋಟ, ಜೂ.3: ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಉಪ್ಲಾಡಿ ತೆಂಕಬೆಟ್ಟು ಬಸ್ ನಿಲ್ದಾಣದ ಬಳಿ ಜೂ.2ರಂದು ನಡೆದಿದೆ.
ಮೃತರನ್ನು ನಂದನ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೋಟ ಮೂರುಕೈ -ಸಾಹೇಬ್ರಕಟ್ಟೆ ರಸ್ತೆಯಲ್ಲಿ ಬನ್ನಾಡಿ ಕಡೆಗೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ವಾಹನ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಡಿಕ್ಕಿ ಹೊಡೆದ ವಾಹನವನ್ನು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ.
ಅಪಘಾತದ ಪರಿಣಾಮ ಬೈಕ್ ಸವಾರ ನಂದನ ಬೈಕ್ ಸಮೇತ ರಸ್ತೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 6:30ರ ಸುಮಾರಿಗೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story




