Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೊಳಲಿ ಪ್ರಶಸ್ತಿಗೆ ವಿದ್ವಾಂಸ ಡಾ.ಶಿವರಾಮ...

ಪೊಳಲಿ ಪ್ರಶಸ್ತಿಗೆ ವಿದ್ವಾಂಸ ಡಾ.ಶಿವರಾಮ ಶೆಟ್ಟಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Jun 2026 6:28 PM IST
share
ಪೊಳಲಿ ಪ್ರಶಸ್ತಿಗೆ ವಿದ್ವಾಂಸ ಡಾ.ಶಿವರಾಮ ಶೆಟ್ಟಿ ಆಯ್ಕೆ

ಉಡುಪಿ, ಜೂ.4: ಕನ್ನಡ ಹಾಗೂ ತುಳು ಭಾಷೆ, ಸಾಹಿತ್ಯ, ಜಾನಪದ, ಸಂಶೋಧನ ಕ್ಷೇತ್ರಗಳ ಹಿರಿಯ ವಿದ್ವಾಂಸರಲ್ಲೊಬ್ಬರಾದ ಡಾ. ಶಿವರಾಮ ಶೆಟ್ಟಿ ಅವರನ್ನು 2026ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್.ಹೆಗ್ಡೆ ಹೆಸರಲ್ಲಿ ಜಂಟಿಯಾಗಿ ನೀಡಲಾಗುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್.ಹೆಗ್ಡೆ ಇವರ ನೆನಪಿನಲ್ಲಿ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂನ್ 20ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿದೆ. ಪ್ರಶಸ್ತಿಯು 20,000ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ.ಬಿ.ಶಿವರಾಮ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬೋಳಾರದಲ್ಲಿ 1957ರಲ್ಲಿ ಬೋಳಾರ ಚಂದಪ್ಪ ಶೆಟ್ಟಿ ಮತ್ತು ಸೇಸಮ್ಮ ದಂಪತಿಗಳ ಪುತ್ರನಾಗಿ ಜನಿಸಿದರು. ಇವರು ಮೈಸೂರು ವಿವಿಯಿಂದ ಮಂಗಳಗಂಗೋತ್ರಿಯ ಕನ್ನಡ ಸ್ನಾತಕೋತ್ತರ ಮತ್ತು ಸಂಶೋಧನ ಕೇಂದ್ರದ ಮೂಲಕ ಸ್ನಾತಕೋತ್ತರ ಪದವಿ ಹಾಗೂ ಮಂಗಳೂರು ವಿವಿಯಿಂದ ‘ತುಳುನಾಡಿನ ಸಸ್ಯ ಜಾನಪದ’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. 1981ರಿಂದ ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿ, ಉಪನ್ಯಾಸಕರಾಗಿ, ಪ್ರಾಧ್ಯಾಪಕ ಹಾಗೂ ಸಂಸ್ಥೆಯ ಅಧ್ಯಕ್ಷರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ 2019ರಲ್ಲಿ ನಿವೃತ್ತರಾದರು.

ಇವರ ಮಾರ್ಗದರ್ಶನದಲ್ಲಿ 10 ಮಂದಿ ವಿದ್ಯಾರ್ಥಿಗಳು ಪಿಎಚ್‌ಡಿ ಪದವಿ ಪಡೆದಿದ್ದಾರೆ. ಕನ್ನಡ ಮತ್ತು ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕತಿಗೆ ಸಂಬಂಧಿಸಿದಂತೆ 130ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮಂಡಿಸಿದ್ದಾರೆ. ಇವರ ಸಂಪಾದಕತ್ವದಲ್ಲಿ 50ಕ್ಕೂ ಅಧಿಕ ಸಂಶೋಧನಾ ಲೇಖನಗಳು ಹಾಗೂ 19ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ.

ಮಂಗಳೂರು ವಿವಿ ಕನಕದಾಸ ಅಧ್ಯಯನ ಪೀಠ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾಗಿ ಹಲವು ಮಹತ್ವದ ಪ್ರಕಟಣೆಗಳನ್ನು ಹೊರತರುವುದರಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ನಿರಂತರ ಅಧ್ಯಯನ, ಅಧ್ಯಾಪನ, ಸಂಶೋಧನೆ, ಸಂಪಾದನೆ, ಸಂಘಟನೆಯ ಮೂಲಕ ಕ್ರಿಯಾಶೀಲರಾಗಿರುವ ಇವರು ಕರ್ನಾಟಕ ಸರಕಾರದ ‘ಕನಕಗೌರವ’, ಬನ್ನಂಜೆ ಬಾಬು ಅಮೀನ್ ಜಾನಪ ವಿದ್ವಾಂಸ ಪ್ರಶಸ್ತಿ ಹಾಗೂ ಕರ್ನಾಟಕ ಸರಕಾರದ 2022-23ನೇ ಸಾಲಿನ ‘ಕನಕಶ್ರೀ’ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X