ಸುಖಾನಂದ ಶೆಟ್ಟಿಗೆ ಡಾಕ್ಟರೇಟ್ ಪದವಿ

ಉಡುಪಿ, ಜೂ.4: ಸುಖಾನಂದ ಶೆಟ್ಟಿ ಇವರು ‘ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನೆಗೆ ಮಣಿಪಾಲದ ಮಾಹೆ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.
ಸುಖಾನಂದ ಶೆಟ್ಟಿ ಇವರು ಈ ಸಂಶೋಧನೆಯನ್ನು ಉಡುಪಿಯ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ (ಆರ್‌ಆರ್‌ಸಿ) ಮೂಲಕ, ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕಿ ಡಾ. ರೇಖಾ ಬನ್ನಾಡಿ ಅವರ ಮಾರ್ಗದರ್ಶನದಲ್ಲಿ ನಡೆಸಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಎಚ್.ಬಿ.ಬಾಬಯ್ಯ ಶೆಟ್ಟಿ ಮತ್ತು ಶಾರದಾಬಿ.ಶೆಟ್ಟಿ ಅವರ ಪುತ್ರರಾದ ಡಾ.ಸುಖಾನಂದ ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
Next Story




