ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜೂ.4: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಹಾಗೂ ಗಣಕ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯಾ ವಿಷಯದಲ್ಲಿ ಎಂಎಸ್ಸಿ, ಬಿ.ಎಡ್, ಎಂ.ಎ. ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾ ಗಿದ್ದು, ಬೋಧನಾ ಕೌಶಲ್ಯ ಹಾಗೂ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಮೊ.ನಂ: 9964153802 ಹಾಗೂ ಆರೂರು ಮೊ.ನಂ: 8277894199, ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಪ್ರಾಂಶುಪಾಲ ರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.






