ಸೆಪ್ಟಂಬರ್‌ವರೆಗೆ ರಸ್ತೆ ಅಗೆತ ನಿಷೇಧ: ಉಡುಪಿ ನಗರಸಭೆ

ಉಡುಪಿ, ಜೂ.6: ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ರಸ್ತೆ ಅಗೆತ ಮಾಡುವುದನ್ನು ಸೆಪ್ಟಂಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ.
ಈ ಬಗ್ಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಅನಗತ್ಯವಾಗಿ ರಸ್ತೆ ತುಂಡರಿಸುವುದು ಕಂಡುಬಂದಲ್ಲಿ, ಅಂತಹ ವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿ ಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story




