ಯುವತಿ ನಾಪತ್ತೆ: ಪ್ರಕರಣ ದಾಖಲು

ಉಡುಪಿ, ಜೂ.6:ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ನಿವಾಸಿ ಸೌಂದರ್ಯ ಹೆಚ್.ಎ. (20) ಎಂಬ ಯುವತಿಯು ಮೇ 30ರಂದು ತನ್ನ ಕಾಲೇಜಿನ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವರು, ಪ್ರವಾಸಕ್ಕೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದಾರೆ.
ಯುವತಿ 4 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈ ಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ: 0820-2520444, ಉಡುಪಿ ಕಂಟ್ರೋಲ್ ರೂಂ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ -ನಿರೀಕ್ಷಕರು ಮೊ.ನಂ:9080805445 ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
Next Story




