Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ...

ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಡಾ.ಪ್ರಕಾಶ್ ಭಟ್

ವಾರ್ತಾಭಾರತಿವಾರ್ತಾಭಾರತಿ7 Jun 2026 7:11 PM IST
share
ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಡಾ.ಪ್ರಕಾಶ್ ಭಟ್

ಶಿರ್ವ, ಜೂ.7: ಇಂದಿನ ಸ್ಥಿತಿಗತಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ದೇಶ ವಿದೇಶಗಳಿಂದ ಅತೀ ವೇಗವಾಗಿ ಹರಡುವ ನಾನಾ ವೈರಸ್‌ಗಳೂ ಪತ್ತೆಯಾಗಿವೆ. ಪ್ರಕೃತಿಯ ಏರುಪೇರುಗಳಿಂದ ಶರೀರಕ್ಕೆ ನಾನಾ ಕಾಯಿಲೆ ಗಳು ಬರುತ್ತವೆ. ದೇಹವನ್ನು ಕಾಪಾಡುವುದರ ಜೊತೆಗೆ ಪ್ರಕೃತಿಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ನಮ್ಮ ಗುರುತರ ಜವಾಬ್ದಾರಿಯೂ ಆಗಿದೆ. ಗೊತ್ತಿಲ್ಲದ ಕಾಯಿಲೆಗಳ ಪತ್ತೆಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಸಹಕಾರಿ ಎಂದು ಹಿರಿಯ ವೈದ್ಯ ಹಾಗೂ ಆರ್ಥೊಪೆಡಿಕ್ ಸ್ಪೆಷಲಿಸ್ಟ್ ಡಾ.ಪ್ರಕಾಶ್ ಭಟ್ ಉಡುಪಿ ಹೇಳಿದ್ದಾರೆ.

ಶಂಕರಪುರ ಸಮೀಪದ ಸಾಲ್ಮರ ಕೃಷ್ಣವೇಣಿ ಆಯುರ್ವೇದ, ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರ, ಜೇಸಿಐ ಶಂಕರಪುರ ಜಾಸ್ಮಿನ್, ಗಾಯತ್ರಿ ವೃಂದ ಬಂಟಕಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಲ್ಮರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾಲಯದಲ್ಲಿ ರವಿವಾರ ಏರ್ಪಡಿಸಿದ ಉಚಿತ ಅರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಹಿರಿಯ ಆಯುರ್ವೇದ ಸರ್ಜನ್ ಡಾ.ಸುಕೇಶ್ ಎ.ಮೂಡಬಿದ್ರೆ ಮಾತನಾಡಿ, ಕಾಯಿಲೆ ಬಂದಾಗ ಮಾತ್ರ ವೈದ್ಯರನ್ನು ಕಾಣುವುದಲ್ಲ. ಆಗಾಗ ಆರೋಗ್ಯ ತಪಾಸಣೆಯನ್ನು ಮಾಡುವುದೂ ಅಗತ್ಯ ವಾಗಿದೆ. ಹಳ್ಳಿ ಪಂಡಿತರು ಆಯುರ್ವೇದ ವೈದ್ಯರಲ್ಲ. ವೈದ್ಯರಲ್ಲಿಗೆ ಹೋಗಿ ತಪಾಸಣೆ ನಡೆಸಿ ಔಷಧಿ ತಂದರೆ ಅದು ಆಯುರ್ವೇದ ಮದ್ದು ಎಂದರು.

ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್‌ನ ಟ್ರಸ್ಟಿ ಹರಿದಾಸ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಜೇಸಿಐ ನಾಯಕ ನವೀನ್ ಅಮೀನ್ ಶಂಕರಪುರ, ಜೇಸಿಐ ಅಧ್ಯಕ್ಷ ರಾಜೇಶ್ ಆಚಾರ್ಯ, ಕಾರ್ಯದರ್ಶಿ ಭವ್ಯ ಸುವರ್ಣ, ಬಂಟಕಲ್ಲು ಗಾಯತ್ರಿ ವೃಂದದ ಅಧ್ಯಕ್ಷೆ ವಿದ್ಯಾ ಹರೀಶ್, ಕೃಷ್ಣವೇಣಿ ಆಯುರ್ವೇದ ಮತ್ತು ಆಶ್ರಯಧಾಮದ ಟ್ರಸ್ಟಿ ಪದ್ಮನಾಭ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಮೇಶ್ ಮಿತ್ತಾಂತಾಯ ಉಪಸ್ಥಿತರಿದ್ದರು.

ಮುಖ್ಯ ವೈದ್ಯಾಧಿಕಾರಿ ಡಾ.ಕೆ.ಲಕ್ಷ್ಮೀಶ ಉಪಾಧ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶುಶ್ರೂಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಶುಶ್ರೂಷಕಿ ನಾಗವೇಣಿ ಆರ್.ಶೆಟ್ಟಿ ವಂದಿಸಿದರು. ಡಾ,ಅನುಪಮಾ, ಭಾರತಿ, ಸರಸ್ವತಿ, ಅಭಿಷೇಕ್ ಶ್ರೀದೇವ್ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X