ಅಕ್ರಮ ಸಾಗಾಟ ಆರೋಪ: ಅನ್ನಭಾಗ್ಯದ ಅಕ್ಕಿ ವಶ

ಸಾಂದರ್ಭಿಕ ಚಿತ್ರ
ಬ್ರಹ್ಮಾವರ, ಜೂ.9: ಗೂಡ್ಸ್ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಬ್ರಹ್ಮಾವರ ಪೊಲೀಸರು ಬ್ರಹ್ಮಾವರ ಆಕಾಶವಾಣಿ ಬಳಿ ಜೂ.8ರಂದು ರಾತ್ರಿ ವೇಳೆ ವಶಪಡಿಸಿಕೊಂಡಿದ್ದಾರೆ.
ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಗೂಡ್ಸ್ ವಾಹನದಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ಕಿ ಯನ್ನು ಸಾಗಿಸುತ್ತಿರುವುದು ಕಂಡು ಬಂದಿತ್ತು. ಸ್ಥಳಕ್ಕೆ ಆಗಮಿಸಿದ ಬ್ರಹ್ಮಾವರ ಆಹಾರ ನಿರೀಕ್ಷಕ ವಸಂತ ಕುಮಾರ್ ಗೂಡ್ಸ್ ವಾಹನವನ್ನು ಪರಿಶೀಲಿಸಿದ್ದು, ಅದರಲ್ಲಿ 47,300 ರೂ. ಮೌಲ್ಯದ ಒಟ್ಟು 13 ಕ್ವಿಂಟಲ್ 92 ಕೆ.ಜಿ 300 ಗ್ರಾಂ ಅಕ್ಕಿ ಪತ್ತೆಯಾಗಿದೆ.
ಆರೋಪಿ ರಿಕ್ಷಾ ಚಾಲಕ ಜೀಪನ್ ಯಾಸಿನ್, ಅಕ್ಕಿ, ರಿಕ್ಷಾ ಹಾಗೂ ತೂಕದ ಮೇಶಿನ್ನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




