Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಖಾಸಗಿ ಬಸ್ ಮಾಲಕರ ಸಂಘದ ಏಕಪಕ್ಷೀಯ ಬಸ್...

ಖಾಸಗಿ ಬಸ್ ಮಾಲಕರ ಸಂಘದ ಏಕಪಕ್ಷೀಯ ಬಸ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯಿಸಿ ಸಿಪಿಎಂ ಪ್ರತಿಭಟನೆ, ಮನವಿ

ವಾರ್ತಾಭಾರತಿವಾರ್ತಾಭಾರತಿ11 Jun 2026 10:04 PM IST
share
ಖಾಸಗಿ ಬಸ್ ಮಾಲಕರ ಸಂಘದ ಏಕಪಕ್ಷೀಯ ಬಸ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯಿಸಿ ಸಿಪಿಎಂ ಪ್ರತಿಭಟನೆ, ಮನವಿ

ಉಡುಪಿ, ಜೂ.11: ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆಯ ಅನುಮತಿ ಇಲ್ಲದೇ ಕರಾವಳಿಯ ಖಾಸಗಿ ಬಸ್ ಮಾಲಕರ ಸಂಘ ಏಕಪಕ್ಷೀಯವಾಗಿ ಶೇ.5ರಿಂದ 8ರಷ್ಟು ಬಸ್ ಟಿಕೇಟ್ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿರುವ ಭಾರತೀಯ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಡುಪಿ ಜಿಲ್ಲಾ ಸಮಿತಿ ಇದರ ವಿರುದ್ಧ ಇಂದು ಮಣಿಪಾಲ ದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಹೆಚ್ಚಿಸಿರುವ ಬಸ್ ಪ್ರಯಾಣ ದರವನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿತು.

ಪೆಟ್ರೋಲ್, ಡೀಸೆಲ್ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ನೆಪವೊಡ್ಡಿ ಜಿಲ್ಲೆಯ ಖಾಸಗಿ ಬಸ್ ಪ್ರಯಾಣ ದರವನ್ನು ಶೇ.5ರಿಂದ 8ರಷ್ಟು ಹೆಚ್ಚಿಸಿರುವುದು ಖಂಡನೀಯ. ಈ ದರ ಏರಿಕೆ ಜನಸಾಮಾನ್ಯರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಾರ್ವಜನಿಕ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವಂತಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಬಸ್ ಮಾಲಕರ ಸಂಘ ಯಾವ ಮಾನದಂಡದ ಆಧಾರದ ಮೇಲೆ ಬೆಲೆ ಏರಿಕೆ ಮಾಡಿದೆ. ಇದು ಸಾರಿಗೆ ಪ್ರಾಧಿಕಾರದ ದರವಾಗಿದೆಯೇ ಎಂಬುದನ್ನು ಜಿಲ್ಲಾಡಳಿತ ಮೊದಲು ಸ್ಪಷ್ಟ ಪಡಿಸಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಒತ್ತಾಯಿಸಿದರು.

ಕೊರೊನಾದ ಅವಧಿಯಲ್ಲಿ ಬಸ್ ಮಾಲಕರ ಸಂಘ ಸದ್ದಿಲ್ಲದೇ ಬಸ್ ಪ್ರಯಾಣ ದರವನ್ನು ಹೆಚ್ಚಿಸಿದ್ದು, ಪರಿಸ್ಥಿತಿ ಸಹಜಗೊಂಡ ಬಳಿಕವೂ ದರವನ್ನು ಕಡಿಮೆ ಮಾಡಿರಲಿಲ್ಲ. ಕಳೆದ ಸುಮಾರು ಆರು ವರ್ಷಗಳಿಂದ ಏರಿಸಿದ ದರ ವನ್ನು ಪ್ರಯಾಣಿಕರು ವಿರೋಧಿಸದೇ ಪಾವತಿಸುತ್ತಾ ಬಂದಿದ್ದಾರೆ. ಆದರೆ ಈಗ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅನುಮತಿ ಪಡೆಯದೇ, ಸಾರ್ವಜನಿಕರ ಅಭಿಪ್ರಾಯವನ್ನೂ ಆಲಿಸದೇ ಏಕಪಕ್ಷೀಯವಾಗಿ ದರ ಏರಿಕೆ ಮಾಡಿರುವುದು ಬಸ್ ಮಾಲಕರ ಸಂಘದ ಸರ್ವಾಧಿಕಾರಿ ಧೋರಣೆಯಾಗಿದೆ ಎಂದವರು ಆರೋಪಿಸಿದರು.

ಈಗಾಗಲೇ ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿಗಳ ಪರಿಣಾಮ ಅಡುಗೆ ಅನಿಲ, ಆಹಾರ ಧಾನ್ಯ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರುತ್ತಿದೆ. ಆದರೆ ದುಡಿಯುವ ವರ್ಗದ ಆದಾಯ ಹಾಗೂ ವೇತನದಲ್ಲಿ ಯಾವುದೇ ಹೆಚ್ಚಳ ಆಗಿಲ್ಲ. ಇಂಥ ಸಮಯದಲ್ಲಿ ಬಸ್ ಪ್ರಯಾಣ ದರ ಖಂಡಿತ ಅವರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತದೆ ಎಂದರು.

ಕೇಂದ್ರ ಸರಕಾರ ತೈಲದ ಬೆಲೆಯನ್ನು ಸತತವಾಗಿ ಏರಿಸುತ್ತಾ ಬಂದರೂ, ಒಮ್ಮೆ ಸಹ ಖಂಡಿಸದ ಬಸ್ ಮಾಲಕರು ಇದೀಗ ಅದರ ಅವಕಾಶ ಪಡೆದು ಏಕಾಏಕಿ ಪ್ರಯಾಣ ದರ ಏರಿಸಿ ಜನರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ, ಖಾಸಗಿ ಬಸ್ ಮಾಲಕರು ಏಕಪಕ್ಷೀಯವಾಗಿ ಹೆಚ್ಚಿಸಿರುವ ಪ್ರಯಾಣ ದರವನ್ನು ಹಿಂದಕ್ಕೆ ಪಡೆಯಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಸಾರಿಗೆ ಪ್ರಾಧಿಕಾರದ ಸಭೆ ಕರೆದು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು ಎಂದು ಸುರೇಶ್ ಕಲ್ಲಾಗರ ಆಗ್ರಹಿಸಿದರು.

ಖಾಸಗಿ ಬಸ್ ದರ ಮತ್ತು ಗ್ಯಾಸ್ ದರ ಹೆಚ್ಚಳ ವಿರೋಧಿಸಿ ಸಿಪಿಎಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಕೊನೆಗೆ ದರವನ್ನು ತಕ್ಷಣ ಹಿಂಪಡೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯ ಮೂಲಕ ಆಗ್ರಹಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಅವರು ಮನವಿಯನ್ನು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಶೇಖರ್ ವಿ., ಎಚ್. ನರಸಿಂಹ, ರಾಜು ಪಡುಕೋಣೆ, ಜಿಲ್ಲಾ ಸಮಿತಿ ಸದಸ್ಯರಾದ ಪ್ರಭಾಕರ ಕುಂದರ್, ಉಮೇಶ್ ಕುಂದರ್, ಸುಭಾಸ್ ನಾಯಕ್, ಬಲ್ಕೀಸ್, ಸಿಪಿಐಎಂ ಪಕ್ಷದ ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೊಲ್ಲ, ಸದಸ್ಯರಾದ ಮಹಾಬಲ ಒಡೆಯರಹೋಬಳಿ, ನಳಿನಿ, ಶೀಲಾವತಿ, ಚಿಕ್ಕ ಮೊಗವೀರ, ನಾಗೇಶ್, ಸಿಐಟಿಯು ಮುಖಂಡರಾದ ಸುರೇಂದ್ರ, ಸುನೀತಾ ಶೆಟ್ಟಿ, ನಾಗರತ್ನ ಪಡುವರಿ, ಜಯಂತಿ, ಸಾರಿಕಾ, ಶಾರದ, ಶರ್ಮಿಳಾ, ಸೌಮ್ಯ, ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯ ಕವಿರಾಜ್ ಎಸ್.ಕಾಂಚನ್ ನಿರೂಪಿಸಿದರೆ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ನಾಗರತ್ನ ನಾಡ ವಂದಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X