Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಟ್ಯಾಪ್ಮಿಯ ನೂತನ ನಿರ್ದೇಶಕರಾಗಿ...

ಟ್ಯಾಪ್ಮಿಯ ನೂತನ ನಿರ್ದೇಶಕರಾಗಿ ಡಾ.ದೇಬಸಿಸ್ ಪ್ರಧಾನ್ ನೇಮಕ

ವಾರ್ತಾಭಾರತಿವಾರ್ತಾಭಾರತಿ12 Jun 2026 8:53 PM IST
share
ಟ್ಯಾಪ್ಮಿಯ ನೂತನ ನಿರ್ದೇಶಕರಾಗಿ ಡಾ.ದೇಬಸಿಸ್ ಪ್ರಧಾನ್ ನೇಮಕ

ಉಡುಪಿ, ಜೂ.12: ದೇಶದ ಪ್ರಮುಖ ಡೀಮ್ಡ್ ವಿವಿಯಾಗಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಅಂಗ ಸಂಸ್ಥೆ, ದೇಶದ ಪ್ರಮುಖ ಮ್ಯಾನೇಜ್‌ಮೆಂಟ್ ಸಂಸ್ಥೆಗಳಲ್ಲಿ ಒಂದಾದ ಟಿ.ಎ.ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ (ಟ್ಯಾಪ್ಮಿ) ನೂತನ ನಿರ್ದೇಶಕರಾಗಿ ಡಾ.ದೇಬಸಿಸ್ ಪ್ರಧಾನ್ ನೇಮಕಗೊಂಡಿದ್ದಾರೆ.

ಶೈಕ್ಷಣಿಕ ಉತ್ಕೃಷ್ಟತೆ, ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಘನತೆ ಹೆಚ್ಚಿಸುವುದು, ಮುಂಚೂಣಿ ಸಂಶೋಧನೆ ಹಾಗೂ ಪ್ರಸ್ತುತ ಉದ್ಯಮ ರಂಗಕ್ಕೆ ಪೂರಕವಾದ ಮ್ಯಾನೇಜ್‌ಮೆಂಟ್ ಶಿಕ್ಷಣವನ್ನು ಒದಗಿಸುವ ಸಂಸ್ಥೆಯ ನಿರಂತರ ಬದ್ಧತೆಗೆ ಪೂರಕವಾಗಿ ಈ ನೇಮಕಾತಿ ಮಾಡಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಟ್ಯಾಪ್ಮಿಯ ನೂತನ ನಿರ್ದೇಶಕ ಡಾ. ಪ್ರಧಾನ್ ಅವರು ಜಮ್‌ಶೆಡ್‌ಪುರ ದ ಪ್ರತಿಷ್ಠಿತ ಎಕ್ಸ್‌ಎಲ್‌ಆರ್‌ಐ ಸಂಸ್ಥೆಯಲ್ಲಿ 20ಕ್ಕೂ ಹೆಚ್ಚು ವರ್ಷಗಳ ಕಾಲ ಮಾರ್ಕೆಟಿಂಗ್ ವಿಭಾಗದ ಪೂರ್ಣಾವಧಿ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿದ್ದಾರೆ. ಅಲ್ಲದೆ, ಅಲ್ಲಿನ ಅಸೋಸಿಯೇಟ್ ಡೀನ್ (ಎಕ್ಸಿಕ್ಯೂಟಿವ್ ಎಜುಕೇಶನ್) ಹಾಗೂ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ರಾಗಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅನುಭವ ಹೊಂದಿದ್ದಾರೆ.

ಮಾರ್ಕೆಟಿಂಗ್ ಮತ್ತು ಗ್ರಾಹಕ ನಡವಳಿಕೆ (ಕನ್ಸ್ಯೂಮರ್ ಬಿಹೇವಿಯರ್) ವಿಷಯದಲ್ಲಿ ಶ್ರೇಷ್ಠ ಲೇಖಕರಾಗಿರುವ ಡಾ.ಪ್ರಧಾನ್ ಅವರು, ವಿಶ್ವದಾದ್ಯಂತ ಮುಂಚೂಣಿಯಲ್ಲಿರುವ ಜರ್ನಲ್‌ಗಳಲ್ಲಿ 30ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಗ್ರಾಹಕರ ಯೋಗಕ್ಷೇಮ ಮತ್ತು ತಂತ್ರಜ್ಞಾನ, ಗ್ರಾಹಕರು- ಬ್ರಾಂಡ್‌ಗಳು ಮತ್ತು ಯಂತ್ರಗಳ ನಡುವಿನ ಪರಸ್ಪರ ಸಂವಹನ, ಬ್ರಾಂಡ್ ಆಕ್ಟಿವಿಸಂ ಹಾಗೂ ಗ್ರಾಹಕರೊಂದಿಗಿನ ಒಡನಾಟ ಇವರ ಪ್ರಮುಖ ಸಂಶೋಧನಾ ವಿಷಯಗಳಾಗಿವೆ.

ಶೈಕ್ಷಣಿಕ ಕ್ಷೇತ್ರದೊಂದಿಗೆ ಡಾ.ಪ್ರಧಾನ್, ಮ್ಯಾನೇಜ್ಮೆಂಟ್ ಕ್ಷೇತ್ರದ ಪ್ರಮುಖ ನಿಯತಕಾಲಿಕ ‘ಮ್ಯಾನೇಜ್‌ಮೆಂಟ್ ಆಂಡ್ ಲೇಬರ್ ಸ್ಟಡೀಸ್ ಜರ್ನಲ್’ನ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಅವರು ಸಿಡ್ನಿ ವಿಶ್ವವಿದ್ಯಾಲಯ, ಸಿಂಗಾಪುರ ಮ್ಯಾನೇಜ್ ಮೆಂಟ್ ವಿಶ್ವವಿದ್ಯಾಲಯ, ಮಿಚಿಗನ್ ವಿಶ್ವವಿದ್ಯಾಲಯ, ಲಂಡನ್ ಬಿಸಿನೆಸ್ ಸ್ಕೂಲ್ ಮತ್ತು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಸೇರಿದಂತೆ ವಿಶ್ವದ ಹಲವಾರು ಪ್ರತಿಷ್ಠಿತ ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ವಿಶೇಷ ಉಪನ್ಯಾಸ ಗಳನ್ನು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X