ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಕಾರ್ಕಳ, ಜೂ.12: ಮಗ ಮೃತಪಟ್ಟ ಚಿಂತೆ ಮತ್ತು ಮದ್ಯಪಾನದ ಚಟದಿಂದ ಮಾನಸಿಕವಾಗಿ ನೊಂದ ದುರ್ಗಾ ಗ್ರಾಮದ ತೆಳ್ಳಾರು ಹೊಸಮನೆ, ದರ್ಖಾಸು ನಿವಾಸಿ ವಿಶ್ವನಾಥ(55) ಎಂಬವರು ಜೂ.11ರಂದು ಬೆಳಗ್ಗೆ ಮನೆಯ ಕೋಣೆಯೊಳಗೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಮದ್ಯಪಾನ ಮಾಡುವ ಚಟ ಹೊಂದಿದ್ದ ಮುಖೇಶ(45) ಎಂಬವರು ವೈಯಕ್ತಿಕ ಕಾರಣದಿಂದ ಮನ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಜೂ.11ರಂದು ಬೆಳಗ್ಗೆ ಮನೆಯ ಅಡುಗೆ ಕೋಣೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




