Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೋಕ್ಸೊ ಪ್ರಕರಣಗಳಲ್ಲಿ ಸಂತ್ರಸ್ತರಿಗೆ...

ಪೋಕ್ಸೊ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ, ಅಪರಾಧಿಗಳಿಗೆ ಕಠಿಣ ಶಿಕ್ಷೆ: ನ್ಯಾ.ಪುರುಷೋತ್ತಮ್

ವಾರ್ತಾಭಾರತಿವಾರ್ತಾಭಾರತಿ13 Jun 2026 7:08 PM IST
share
ಪೋಕ್ಸೊ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ, ಅಪರಾಧಿಗಳಿಗೆ ಕಠಿಣ ಶಿಕ್ಷೆ: ನ್ಯಾ.ಪುರುಷೋತ್ತಮ್

ಕಾಪು, ಜೂ.12: ಪೋಕ್ಸೋ ಪ್ರಕರಣದ ಸಂತ್ರಸ್ತೆಯರಿಗೆ ನ್ಯಾಯಾ ಲಯವು ಪ್ರಕರಣದ ತೀರ್ಪಿನಲ್ಲಿ ಪರಿಹಾರವನ್ನು ಆದೇಶಿಸುತ್ತದೆ. ಆಕೆಯ ಮುಂದಿನ ಜೀವನಕ್ಕೆ ಸಹಕಾರಿಯಾಗುವಂತೆ, ಸಮಾಜದಲ್ಲಿ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಕರಣದ ಗಂಭೀರತೆಯ ಆಧಾರದಲ್ಲಿ ಪರಿಹಾರವನ್ನು ನಿರ್ಧಾರಿಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ್ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಯಂತೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಾಲೇಜುಗಳಲ್ಲಿ ಪೋಕ್ಸೊ ಕಾಯ್ದೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಗುರುವಾರ ಕಟಪಾಡಿಯ ಎಸ್‌ವಿಎಸ್ ಪಿಯು ಕಾಲೇಜಿನಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸಾಕ್ಷಿಗಳು ನ್ಯಾಯಾಲಯದಲ್ಲಿ ಸರಿಯಾದ ಹೇಳಿಕೆ ನೀಡದೇ ಇದ್ದರೂ, ವೈದ್ಯಕೀಯ ಪರೀಕ್ಷೆಯ ಆಧಾರದಲ್ಲಿ ಆರೋಪವನ್ನು ಸಾಭೀತು ಪಡಿಸಲು ಸಾಧ್ಯವಿದೆ. ಆರೋಪ ಸಾಭೀತಾದಲ್ಲಿ ಕನಿಷ್ಠ 10 ವರ್ಷದಿಂದ ಜೀವಾವಧಿ ಶಿಕ್ಷೆ ನೀಡುವ ಅವಕಾಶ ಈ ಕಾಯ್ದೆಯಲ್ಲಿದೆ ಎಂದರು.

ಕೊಲೆ ಅಥವಾ ಇತರ ಪ್ರಕರಣಗಳಲ್ಲಿ ಜೀವಾವಧಿ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷೆಗೆ ಒಳಗಾದವರಿಗೆ ಜೈಲಿನಲ್ಲಿ ಸನ್ನಢತೆಯ ಆಧಾರದಲ್ಲಿ ಶಿಕ್ಷೆಯ ಪ್ರಮಾಣವನ್ನು ತಗ್ಗಿಸಲು ವಿನಂತಿಸುವ ಅವಕಾಶ ಇದೆ. ಆದರೆ ಪೋಕ್ಸೊ ಕಾಯ್ದೆಯಲ್ಲಿ ಶಿಕ್ಷೆಗೆ ಒಳಗಾದರೇ ಆರೋಪಿ ಈ ಅವಕಾಶದಿಂದ ವಂಚಿತರಾಗುತ್ತದೆ ಎಂದು ಅವರು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನಿತ್ಯಾನಂದ ಶೆಣೈ, ವೆಂಕರಮಣ ಭಟ್, ಪ್ರಾಂಶುಪಾಲ ಡಾ.ದಯಾನಂದ್ ಪೈ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X