ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಜಗದೀಶ ಪೂಜಾರಿ ಬಂಧನ

ಮಣಪಾಲ, ಜೂ.13: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ(33) ಎಂಬಾತನನ್ನು ಮಣಿಪಾಲ ಪೊಲೀಸರು ಜೂ.12ರಂದು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರು ಈ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
ಬಂಧಿತ ಆರೋಪಿ ವಿರುದ್ದ ಮಣಿಪಾಲ ಮತ್ತು ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 3 ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ 2 ಪ್ರಕರಣಗಳು ದಾಖಲಾಗಿವೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣಗಳಲ್ಲಿ 1 ಪ್ರಕರಣವು ನ್ಯಾಯಾಲಯದ ವಿಚಾರಣೆಯಲ್ಲಿದ್ದು ಉಳಿದ 2 ಪ್ರಕರಣಗಳು ತನಿಖೆಯಲ್ಲಿದೆ. ದಾಖಲಾದ 2 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ.
Next Story




