Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತ್ರಾಸಿ-ಮರವಂತೆ ಕಡಲತೀರದಲ್ಲಿ ತಡೆಬೇಲಿ...

ತ್ರಾಸಿ-ಮರವಂತೆ ಕಡಲತೀರದಲ್ಲಿ ತಡೆಬೇಲಿ ಕಾಮಗಾರಿ ಪೂರ್ಣ: ಮಳೆಗಾಲದ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ13 Jun 2026 9:37 PM IST
share
ತ್ರಾಸಿ-ಮರವಂತೆ ಕಡಲತೀರದಲ್ಲಿ ತಡೆಬೇಲಿ ಕಾಮಗಾರಿ ಪೂರ್ಣ: ಮಳೆಗಾಲದ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಕುಂದಾಪುರ, ಜೂ.13: ಪ್ರಸಿದ್ಧ ತ್ರಾಸಿ-ಮರವಂತೆ ಕಡಲತೀರದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಅರೆಬರೆ ತಡೆಬೇಲಿ ಕಾಮಗಾರಿಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಂಬಂಧಪಟ್ಟ ಇಲಾಖೆ ಇದೀಗ ಸಮರ್ಪಕ ಕಾಮಗಾರಿಯನ್ನು ಪೂರ್ಣ ಗೊಳಿಸಿದೆ.

ಕಡಲತೀರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಯಂತ್ರಿಸಿ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಉದ್ದಕ್ಕೂ ತಡೆಬೇಲಿ ಅಳವಡಿಸಲಾಗಿದೆ.

ಈ ಹಿಂದೆ, ತ್ರಾಸಿ ಬೀಚ್ ಪಾರ್ಕ್ ಒಂದು ಬದಿಯಿಂದ ಆರಂಭ ಗೊಂಡಿದ್ದ ತಡೆಬೇಲಿ ನಿರ್ಮಾಣ ಕಾರ್ಯ, ಹಿಂದಿನ ಸ್ಕೈಡೈನ್ ಕಾರ್ಯಾಚರಣೆ ನಡೆದ ಸ್ಥಳದವರೆಗೆ ಮಾತ್ರ ಸೀಮಿತಗೊಂಡಿತ್ತು. ಮರವಂತೆಯ ಅಪಾಯಕಾರಿ ಪ್ರದೇಶಕ್ಕೆ ಯಾವುದೇ ತಡೆ ಇಲ್ಲದ್ದರಿಂದ ಪ್ರವಾಸಿಗರು ಕಡಲಿಗೆ ಇಳಿದು ಬಂಡೆಕಲ್ಲುಗಳ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಈ ಬಗ್ಗೆ ’ವಾರ್ತಾಭಾರತಿ’ ಜೂ.11ರಂದು ‘ಮರವಂತೆ ಬೀಚ್‌ನಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಪ್ರವಾಸಿಗರ ಪೋಟೊ ಪೈಪೋಟಿ’ ಶೀರ್ಷಿಕೆಯಲ್ಲಿ ವಿಸ್ತೃತ ವರದಿ ಪ್ರಕಟಿಸಿ ಸಂಬಂಧಪಟ್ಟ ಇಲಾಖೆಯ ಗಮನ ಸೆಳೆದಿತ್ತು.

ಇದೀಗ ಸ್ಕೈಡೈನ್ ಪ್ರದೇಶದಿಂದ ಮರವಂತೆ ವರಾಹಸ್ವಾಮಿ ದೇವಸ್ಥಾನ ದವರೆಗೆ ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಕೆಎನ್‌ಡಿ ಸಿಬ್ಬಂದಿಯ ಸಹಾಯದಿಂದ ತಡೆಬೇಲಿ ಅಳವಡಿಸಲಾಗಿದೆ. ಇದರಿಂದ ಪ್ರವಾಸಿಗರು ಅಪಾಯಕಾರಿ ಪ್ರದೇಶಗಳಿಗೆ ತೆರಳುವುದನ್ನು ತಡೆಯುವ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಪ್ರವಾಸೋದ್ಯಮ ಇಲಾಖೆ ಆರಂಭದಲ್ಲಿ ಅರೆಬರೆಯಾಗಿ ತಡೆಬೇಲಿ ಅಳವಡಿಸಿದ್ದಕ್ಕೆ ಸ್ಥಳೀಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತ್ರಾಸಿ ಬೀಚ್ ಪಾರ್ಕ್‌ನಿಂದ ಸ್ಕೈಡೈನ್ ಪ್ರದೇಶದವರೆಗೆ ಮಾತ್ರ ತಡೆಬೇಲಿ ನಿರ್ಮಿಸಿ ಉಳಿದ ಪ್ರದೇಶಗಳನ್ನು ನಿರ್ಲಕ್ಷಿಸಲಾಗಿತ್ತು. ಮರವಂತೆ ವರಾಹಸ್ವಾಮಿ ದೇವಸ್ಥಾನದ ಎದುರು ಅಳವಡಿಸಲಾಗಿದ್ದ ನೆಟ್ ತಡೆಬೇಲಿಯೂ ಸಮರ್ಪಕವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

ಮಳೆಗಾಲ ಆರಂಭಕ್ಕೂ ಮುನ್ನ ಕಡಲತೀರ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆರು ಮಂದಿ ಕೆಎನ್‌ಡಿ ಸಿಬ್ಬಂದಿ ಹಾಗೂ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಸರದಿ ಪ್ರಕಾರ ಪ್ರತಿನಿತ್ಯ ತ್ರಾಸಿ-ಮರವಂತೆ ಕಡಲತೀರದಲ್ಲಿ ಭದ್ರತೆಗೆ ನಿಯೋಜಿಸಲಾಗಿದೆ. ಪ್ರವಾಸಿಗರು ಕಡಲಿಗೆ ಇಳಿಯದಂತೆ ನಿರಂತರವಾಗಿ ಎಚ್ಚರಿಕೆ ನೀಡಲಾಗುತ್ತಿದ್ದು, ಜಿಲ್ಲಾಡಳಿತದ ನಿರ್ದೇಶನದಂತೆ ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್. ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X