Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ:...

ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ: ಹಲವು ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ14 Jun 2026 8:38 PM IST
share
ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ: ಹಲವು ಮನೆಗಳಿಗೆ ಹಾನಿ

ಉಡುಪಿ, ಜೂ.14: ಉಡುಪಿ ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಹಾಗೂ ರವಿವಾರ ಬೆಳಗ್ಗೆಯಿಂದ ಸಂಜೆಯವರೆಗೂ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಇದರಿಂದ ಹಲವು ಮನೆಗಳಿಗೆ ಹಾನಿಯಾಗಿರುವುದು ವರದಿ ಯಾಗಿದೆ.

ಕಳೆದ 24ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸರಾಸರಿ 32.9ಮಿ.ಮೀಟರ್ ಮಳೆಯಾಗಿದ್ದು, ಕಾರ್ಕಳ- 14.3ಮಿ.ಮೀ., ಕುಂದಾಪುರ-36.1ಮಿ.ಮೀ., ಉಡುಪಿ- 53.2ಮಿ.ಮೀ., ಬೈಂದೂರು -38.9ಮಿ.ಮೀ., ಬ್ರಹ್ಮಾವರ- 36.6ಮಿ.ಮೀ., ಕಾಪು-57.8ಮಿ.ಮೀ., ಹೆಬ್ರಿ-18.6 ಮಿ.ಮೀಟರ್ ಮಳೆಯಾಗಿದೆ.

ಕುಂದಾಪುರ ಹಾಗೂ ಬೈಂದೂರು ತಾಲೂಕಿನಾದ್ಯಂತ ಮಧ್ಯಾಹ್ನದ ವೇಳೆಗೆ ಗಾಳಿ- ಮಳೆಯಾಗಿದ್ದು, ಅದರಲ್ಲೂ ಗಾಳಿಯಬ್ಬರ ಜೋರಾಗಿತ್ತು. ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಮಂಡಿಕೇರಿ ಎಂಬಲ್ಲಿ ಸುಂದರ ಖಾರ್ವಿ ಎಂಬವರ ಮನೆ ಮೇಲೆ ಮರ ಬಿದ್ದು 25000ರೂ., ಸುರೇಂದ್ರ ಕಿಣಿ ಎಂಬವಪ ಮನೆ ಮೇಲೆ ಮರ ಬಿದ್ದು 25000 ರೂ., ಕೋಣಿ ಗ್ರಾಮದ ಸುಮನ ಎಂಬವರ ಮನೆ ಮೇಲೆ ಮರ ಬಿದ್ದು 30000ರೂ., ಬಸ್ರೂರು ಗ್ರಾಮದ ಜೆಎಂ ರಸ್ತೆಯ ಸೀತು ಎಂಬವರ ಮನೆ ಮೇಲೆ ಮರ ಬಿದ್ದು 30000ರೂ., ಅಬ್ದುಲ್ ಸಮದ್ ಎಂಬವರ ಮನೆ ಮೇಲೆ ಮರ ಬಿದ್ದು 40000ರೂ. ಹಾಗೂ ಜಯಲಕ್ಷ್ಮೀ ಎಂಬವರ ಮನೆ ಮೇಲೆ ಮರ ಬಿದ್ದು ಸುಮಾರು 80000ರೂ. ನಷ್ಟ ಉಂಟಾಗಿದೆ.

ಹೆದ್ದಾರಿಯಲ್ಲಿ ಕೃತಕ ನೆರೆ: ರಾಷ್ಟ್ರೀಯ ಹೆದ್ದಾರಿ ಸಹಿತ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ, ಗ್ರಾಮೀಣ ರಸ್ತೆಗಳ ಅಲ್ಲಲ್ಲಿ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನು ಕೂಡ ಬಹುತೇಕ ಕಡೆಗಳಲ್ಲಿ ಚರಂಡಿ ಸ್ವಚ್ಛ ಮಾಡದೇ ಇರುವುದರಿಂದ, ಮಳೆ ನೀರು ಸರಾಗ ಹರಿದು ಹೋಗದೇ, ಹೆದ್ದಾರಿಯಲ್ಲೇ ನಿಂತು ಇನ್ನೊಂದು ವಾಹನಗಳ ಎರಚುತ್ತಿದೆ. ಇನ್ನು ಕೆಲ ಮಣ್ಣಿನ ರಸ್ತೆಗಳಂತೂ ಒಂದೇ ಮಳೆಗೆ ರಾಡಿಯಾಗಿ, ಕೆಸರು ಗದ್ದೆಯಂತಾಗಿದೆ.

ಕುಂದಾಪುರ - ಬೈಂದೂರು ಹೆದ್ದಾರಿಯ ತಲ್ಲೂರಿನ ಬಸ್ ನಿಲ್ದಾಣ ಬಳಿ ಭಾರೀ ಪ್ರಮಾಣದ ಮಳೆ ನೀರು ರಸ್ತೆಯ ಲ್ಲಿಯೇ ಹರಿಯುತ್ತಿದ್ದು, ಇದರಿಂದ ವಾಹನ ಸವಾರರು ಮಾತ್ರವಲ್ಲದೆ, ಜನರು ತೊಂದರೆ ಅನುಭವಿಸು ವಂತಾಗಿದೆ. ಇಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇನ್ನು ಸರ್ಜನ್ ಆಸ್ಪತ್ರೆಗೂ ತುಸು ಹಿಂದೆ ಸರ್ವಿಸ್ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದ್ದು, ಇದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದಲ್ಲದೆ ಅಂಕದ ಕಟ್ಟೆಯ ಶಾಲೆಯ ಬಳಿ ಹೆದ್ದಾರಿಯಲ್ಲಿಯೇ ನೀರು ನಿಲ್ಲುತ್ತಿದ್ದು, ಮಳೆ ನೀರು ಹರಿದು ಹೋಗುತ್ತಿಲ್ಲ. ಇನ್ನು ಟಿಟಿ ರಸ್ತೆ ಅಂರ್ಡ ಪಾಸ್ ಮಾತ್ರವಲ್ಲದೆ, ಅಲ್ಲಿನ ಸರ್ವಿಸ್ ರಸ್ತೆ ಬಳಿಯ ನೀರು ನಿಲ್ಲುವ ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ಸಾರ್ವಜನಿಕರು ದೂರಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X