ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ, ಜೂ.15: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ರಾಜ್ಯ ಸರಕಾರದ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಒಂದನೇ ತರಗತಿಯಿಂದ ಎಸೆಸೆಲ್ಸಿ ವರೆಗಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ - https://ssp.postmatric.karnataka.gov.in-ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ - https://ssp.postmatric.karnataka.gov.in/post_sa_12627/login-ನಲ್ಲಿ ಎಸ್‌ಎಸ್‌ಪಿ ತಂತ್ರಾಂಶ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ’ಸಿ’ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820- 2574810, 2574811 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.




