Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಥಿಲಗೊಂಡ ಸರಕಾರಿ ಶಾಲೆಗಳ ದುರಸ್ತಿಗೆ...

ಶಿಥಿಲಗೊಂಡ ಸರಕಾರಿ ಶಾಲೆಗಳ ದುರಸ್ತಿಗೆ ಪ್ರಸ್ತಾವನೆ: ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ15 Jun 2026 9:17 PM IST
share
ಶಿಥಿಲಗೊಂಡ ಸರಕಾರಿ ಶಾಲೆಗಳ ದುರಸ್ತಿಗೆ ಪ್ರಸ್ತಾವನೆ: ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ

ಉಡುಪಿ, ಜೂ.15: ಶಿಥಿಲಗೊಂಡಿರುವ ಸರಕಾರಿ ಶಾಲೆಗಳನ್ನು ಗುರುತಿಸಿ ಅಂತಹ ಶಾಲೆಗಳ ದುರಸ್ತಿಗೆ ಅಗತ್ಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸು ವಂತೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಇಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಜಿಲ್ಲೆಯಲ್ಲಿ 5 ಜಿಲ್ಲೆಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮಳೆಗಾಲದಲ್ಲಿ ಅನಾಹುತ ಗಳನ್ನು ತಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಶಿಥಿಲಗೊಂಡ ಶಾಲೆಗಳ ಪಟ್ಟಿ ತಯಾರಿಸಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, 42 ಕೊಠಡಿಗಳಲ್ಲಿ ಹೆಚ್ಚಿನ ದುರಸ್ತಿ ಕಾರ್ಯ ಅಗತ್ಯವಿದೆ. 60 ಕೊಠಡಿಗಳಲ್ಲಿ ಸಣ್ಣಪುಟ್ಟ ದುರಸ್ತಿ ಸಾಕಾಗುತ್ತಿದೆ. ಈ ಬಗ್ಗೆ ಅಂದಾಜುಪಟ್ಟಿ ತಯಾರಿಸಿ ನೀಡುವಂತೆ ಇಂಜಿನಿಯರಿಂಗ್ ವಿಭಾಗಕ್ಕೆ ಕೋರಿಕೆ ಸಲ್ಲಿಸಲಾಗಿದೆ ಎಂದರು.

ಕಳೆದ ಮೂರು ತಿಂಗಳಿನಿಂದ ನೂರಾರು ಮಂದಿಗೆ ವೃದ್ಧಾಪ್ಯವೇತನ ಬಿಡುಗಡೆಯಾಗಿಲ್ಲ. ಸರ್ವೆಯರ್ ಮುಷ್ಕರ ದಿಂದ ಬಡವರು ಮನೆಕಟ್ಟಲು 9/11 ಪಡೆಯಲು ಪರದಾಡುವಂತಾಗಿದೆ. ಎಲ್ಲೂರು ಗೋಶಾಲೆ ಕಾಮಗಾರಿ ಪೂರ್ಣಗೊಂಡು 6 ತಿಂಗಳಾಗಿದ್ದು, ಆದಷ್ಟು ಬೇಗ ಕಾರ್ಯಾರಂಭ ಮಾಡಲು ಕ್ರಮವಹಿಸಬೇಕು ಎಂದು ಶಾಸಕ ಗುರ್ಮೆ ತಿಳಿಸಿದರು.

ಸಭೆಯಲ್ಲಿ ವೈದ್ಯಕೀಯ ಹಿತದೃಷ್ಟಿಯಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ವಿಳಂಬ ಮಾಡದೆ ಶೀಘ್ರವೇ ಒದಗಿಸಿ ಕೊಡುವ ಬಗ್ಗೆ ತಿಳಿಸ ಲಾಯಿತು. ಮಳೆಗಾಲ ಆರಂಭವಾಗಿದ್ದು ರಸ್ತೆಯಲ್ಲಿನ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ನಿರ್ಮಾಣ ಹಾಗೂ ಚರಂಡಿಗಳಲ್ಲಿನ ಹುಲ್ಲು ಮತ್ತು ಹೂಳು ವಿಲೇವಾರಿಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.

ಮುಂಗಾರು ಮಳೆ ಆರಂಭವಾಗಿದ್ದು ರೈತರ ಬೇಡಿಕೆಗೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಬೀಡಾಡಿ ದನಗಳನ್ನು ಹೂಳಲು ಗೋ ರುದ್ರಭೂಮಿ ಪ್ರಾರಂಭಿಸಲಾಗಿದೆ. ಇದೇ ರೀತಿ ನಗರ ಪ್ರದೇಶದಲ್ಲಿ ಪ್ರಾಣಿಗಳ ಕಳೆಬರ ಸುಡಲು ವಿದ್ಯುತ್ ಚಿತಾಗಾರಗಳನ್ನು ಅಳವಡಿಸುವುದು ಅತೀ ಅಗತ್ಯವಾಗಿದೆ ಎಂದು ಗುರ್ಮೆ ತಿಳಿಸಿದರು.

ದೇವಸ್ಥಾನಗಳ ಆದಾಯಕ್ಕೆ ಅನುಗುಣವಾಗಿ ಗ್ರೇಡ್ ನೀಡಲು ದತ್ತಿ ಇಲಾಖೆ ಹೊಸದಾಗಿ ಆದೇಶ ಮಾಡಿದೆ. ಈ ಬಗ್ಗೆ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಬೇಕು. ಗ್ರೇಡ್ ವಿಳಂಬದಿಂದ ಪೂಜೆ, ಪ್ರಸಾದ ವಿತರಕರಿಗೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ. ಪೂಜಾ ಸಾಮಗ್ರಿ ಪೂರೈಕೆ ಮಾಡಿದವರ ಬಿಲ್ ಬಾಕಿ ಉಳಿದಿದೆ. ಇದರಿಂದ ದೇವಸ್ಥಾನಗಳಲ್ಲಿ ಅವ್ಯವಸ್ಥೆ ಉಂಟಾಗುವ ಸಾಧ್ಯತೆಗಳಿವೆ ಎಂದು ಯಶ್‌ಪಾಲ್ ಸುವರ್ಣ ತಿಳಿಸಿದರು.

ಸಭೆಯಲ್ಲಿ ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿ ಕಾರಿ ವಿಜಯ, ಉಡುಪಿ ತಹಶೀಲ್ದಾರ್ ಗುರುರಾಜ್, ಉಡುಪಿ ನಗರ ಸಭೆಯ ಪೌರಾಯುಕ್ತ ಮಹಾಂತೇಶ್ ಹಾಗೂ ಉಡುಪಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X