Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್ ಬಗ್ಗೆ ಕಾಂಗ್ರೆಸ್‌ನಿಂದ...

ಎಸ್‌ಐಆರ್ ಬಗ್ಗೆ ಕಾಂಗ್ರೆಸ್‌ನಿಂದ ಜನಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Jun 2026 9:55 PM IST
share
ಎಸ್‌ಐಆರ್ ಬಗ್ಗೆ ಕಾಂಗ್ರೆಸ್‌ನಿಂದ ಜನಜಾಗೃತಿ ಕಾರ್ಯಕ್ರಮ

ಉಡುಪಿ, ಜೂ.16: ಜೂನ್ 30ರಿಂದ ಜುಲೈ 29ರ ವರೆಗೆ ನಡೆಯಲಿರುವ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಪ್ರತಿ ಗ್ರಾಪಂ ವ್ಯಾಪ್ತಿ ಯಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರು, ಬಿಎಲ್‌ಎ ಒಂದು, ಬಿಎಲ್‌ಎ 2 ಮತ್ತು ಕಾರ್ಯಕರ್ತರು ಸಂಪೂರ್ಣ ಸಜ್ಜಾಗಿದ್ದು, ಜೂ.23ರಂದು ಉಡುಪಿ ಜಿಲ್ಲೆಯ ಮನೆ ಮನೆ ಭೇಟಿ ನೀಡಿ ಎಸ್‌ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದಾರೆ. ಮನೆಮನೆ ಭೇಟಿಯ ಮೂಲಕ ಮಾಹಿತಿ ನೀಡಲಾಗುತ್ತದೆ ಮತ್ತು ಬೂತ್ ಮಟ್ಟದಲ್ಲಿ ಬಿಎಲ್‌ಎಗಳ ಮೂಲಕ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಜೂ.21ರಂದು ಬೆಂಗಳೂರಿನಲ್ಲಿ ನಡೆಯಲಿರುವ ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯ ಎಲ್ಲ ನಾಯಕರುಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ 10 ಬ್ಲಾಕ್ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವರು ಎಂದು ಅವರು ಹೇಳಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಎಸ್‌ಐಆರ್ ಈಗಾಗಲೇ ಹಲವು ರಾಜ್ಯಗಳಲ್ಲಿ ಅನುಷ್ಠಾನ ಮಾಡಿದ್ದು ಲಕ್ಷಾಂತರ ಮಂದಿ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಆಯೋಗ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಮಹಿಳೆಯರು, ಬಡವರನ್ನು ಗುರಿ ಮಾಡಿಕೊಂಡು ಅವರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ಮಾಡುತ್ತಿದೆ ಎಂದು ತಿಳಿಸಿದರು.

ಎಸ್‌ಐಆರ್ ಎಂಬುದು ಎನ್‌ಆರ್‌ಸಿ, ಸಿಎಎ ಇದರ ಪ್ರತಿರೂಪ ವಾಗಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿಯಾಗಿರುವ ಎಸ್‌ಐಆರ್‌ನಿಂದ ಆಗುವ ತೊಂದರೆಗಳಿಗೆ ಕೇಂದ್ರ ಸರಕಾರವೇ ನೇರ ಹೊಣೆಯಾಗಲಿದೆ. ಇದೆಲ್ಲವೂ ಚುನಾವಣೆ ಗೆಲ್ಲುವ ತಂತ್ರವಾಗಿ ಮಾಡ ಲಾಗುತ್ತದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮತದಾರರ ಮತದಾನದ ಹಕ್ಕನ್ನು ಉಳಿಸಲು ಜಾಗೃತಿ ಕಾರ್ಯಕ್ರಮವನ್ನು ನಡೆಸಲಿದೆ ಎಂದು ಅವರು ಹೇಳಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಪ್ರಧಾನಿ ನೆಹರೂ ಅವಗಿಂತ ಮೋದಿ ಹೆಚ್ಚು ಕಾಲ ಪ್ರಧಾನಿಯಾ ದರು ಎಂಬುದು ಮುಖ್ಯ ಅಲ್ಲ. ಅವರು ಈ ದೇಶಕ್ಕೆ ಏನು ಮಾಡಿದರು ಎಂಬುದು ಮುಖ್ಯ. ನಮ್ಮ ಕಾರ್ಯಕರ್ತರು ಕೇಂದ್ರ ಸರಕಾರದ ವಿಫಲತೆಯನ್ನು ಮನೆ ಮನೆಗೆ ತಿಳಿಸುವ ಕೆಲಸ ಮುಂದಿನ ದಿನಗಳಲ್ಲಿ ಮಾಡಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳಕೆಬೈಲ್, ಮುಖಂಡರಾದ ಉದಯ ಶೆಟ್ಟಿ ಮುನಿಯಾಲ್, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರೀಶ್ ಕಿಣಿ, ರಾಜು ಪೂಜಾರಿ, ಹರಿಪ್ರಸಾದ್ ರೈ, ಜ್ಯೋತಿ ಹೆಬ್ಬಾರ್, ಸುಭೋದ್ ರಾವ್, ಸಂತೋಷ್ ಕುಲಾಲ್, ವೈ.ಸುಕುಮಾರ್, ಗೋಪಿನಾಥ್ ಭಟ್, ಪ್ರಶಾಂತ್ ಜತ್ತನ್ನ, ರಮೇಶ್ ಕಾಂಚನ್, ಕಿಶೋರ್ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X