ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿಗೆ ಸನ್ಮಾನ

ಮಣಿಪಾಲ: ಶಾಲಾ ಬಸ್ಸಿನಲ್ಲಿದ್ದ 40 ವಿದ್ಯಾರ್ಥಿಗಳನ್ನು ಅಪಾಯದಿಂದ ರಕ್ಷಿಸಿದ ವಿದ್ಯಾರ್ಥಿ ಅಂಶೆಲ್ ಶರುನ್ ಅವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಾಲೆಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಮಣಿಪಾಲದ ಮಾಧವ ಕೃಪಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಂಶೆಲ್ ಶರುನ್ ತನ್ನ ಶಾಲಾ ಬಸ್ಸಿನ ಚಾಲಕರು ಚಾಲನೆಯ ಸಂದರ್ಭದಲ್ಲಿ ಹಠಾತ್ ಅನಾರೋಗ್ಯಕ್ಕೀಡಾಗಿ ಬಸ್ ನಿಯಂತ್ರಣ ತಪ್ಪಿದಾಗ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಭಾರೀ ಅವಘಡವನ್ನು ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ, ನಗರ ಬಿಜೆಪಿ ಯುವಮೋರ್ಚದ ಅಧ್ಯಕ್ಷ ಶ್ರೀವತ್ಸ, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷ ಡೆನಿಸ್ ಮಸ್ಕರೇನ್ಹಸ್, ಯುವ ಮೋರ್ಚಾದ ಪದಾಧಿಕಾರಿಗಳಾದ ನಿತಿನ್ ಪೈ, ಧನುಷ್ ಬಿ ಕೆ., ಭೂಷಣ್ ಕುಮಾರ್, ಶಾಲೆಯ ವ್ಯವಸ್ಥಾಪಕ ರಮೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.
Next Story




