ಗ್ರಾಮ ಸಹಾಯಕ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜೂ.17:ಉಡುಪಿ ತಾಲೂಕು ಅಲೆವೂರು ಗ್ರಾಮದ ಗ್ರಾಮ ಸಹಾಯಕ ತಾತ್ಕಾಲಿಕ ಹುದ್ದೆ ನೇಮಕಾತಿಗೆ, ಷರತ್ತಿಗೊಳಪಟ್ಟು 25ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಗ್ರಾಮದಲ್ಲಿ ವಾಸವಿರುವ, ಓದು, ಬರಹ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ, ಈ ಹಿಂದೆ ಗ್ರಾಮ ಸಹಾಯ ಕರಾಗಿದ್ದು, ಸೇವೆಯಲ್ಲಿರು ವಾಗಲೇ ಮರಣ ಹೊಂದಿದವರ ಕುಟುಂಬದ ಸದಸ್ಯರು ಅಥವಾ ಸ್ಥಳೀಯ ಕಚೇರಿಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 30ರ ಒಳಗೆ ಉಡುಪಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಬಹುದು. ನಿಗದಿತ ಸಮಯದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಡುಪಿ ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.
Next Story




