ಉಡುಪಿ: ಜಿಲ್ಲಾ ರೆಡ್ ಕ್ರಾಸ್ ಸಭಾಪತಿಯಾಗಿ ಡಾ.ಅಶೋಕ್ ಕುಮಾರ್

ಉಡುಪಿ, ಜೂ.19: ಖ್ಯಾತ ವೈದ್ಯ ಡಾ.ಅಶೋಕ್ ಕುಮಾರ್ ವೈ.ಜಿ. ಅವರನ್ನು ಇತ್ತೀಚೆಗೆ ರೆಡ್‌ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮುಂದಿನ ವಾರ್ಷಿಕ ಮಹಾಸಭೆಯವರೆಗೆ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಗಳಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ರೆಡ್‌ಕ್ರಾಸ್‌ನ ಸಭಾಪತಿಗಳಾಗಿ ಕಾರ್ಯ ನಿರ್ವಹಿಸುತ್ತಿ ರುವುದರಿಂದ ಜಿಲ್ಲಾ ಸಭಾಪತಿ ಸ್ಥಾನಕ್ಕೆ ಬಸ್ರೂರು ರಾಜೀವ್ ಶೆಟ್ಟಿ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ ಆಡಳಿತ ಮಂಡಳಿ ಈ ನೇಮಕ ಮಾಡಿದೆ. ಡಾ.ಅಶೋಕ್ ಕುಮಾರ್ ವೈ.ಜಿ ಅವರು ಬಸ್ರೂರು ರಾಜೀವ್ ಶೆಟ್ಟಿ ಅವರಿಂದ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದರು.
ಡಾ.ಅಶೋಕ್‌ಕುಮಾರ್ ಕಳೆದ ಒಂದೂವರೆ ದಶಕದಿಂದ ಜಿಲ್ಲಾ ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾಗಿ ದ್ದಾರೆ. ಜಿಲ್ಲಾ ರೆಡ್‌ಕ್ರಾಸ್‌ನ ಉಪಸಭಾಪತಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ವಿ.ಜಿ. ಶೆಟ್ಟಿ ಅವರನ್ನು ಆಡಳಿತ ಮಂಡಳಿ ನೇಮಿಸಿದೆ.
Next Story




