Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ್ಯಾಯಕ್ಕಾಗಿ ಸರಿಯಾದ ಮಾರ್ಗ...

ನ್ಯಾಯಕ್ಕಾಗಿ ಸರಿಯಾದ ಮಾರ್ಗ ಕಂಡುಕೊಳ್ಳದಿದ್ದರೆ ಬ್ರಿಟಿಷರ ಆಡಳಿತಕ್ಕಿಂತ ಹೀನಾಯ ಸ್ಥಿತಿ ನಿರ್ಮಾಣ: ಶಾನುಭಾಗ್

ವಾರ್ತಾಭಾರತಿವಾರ್ತಾಭಾರತಿ20 Jun 2026 8:16 PM IST
share
ನ್ಯಾಯಕ್ಕಾಗಿ ಸರಿಯಾದ ಮಾರ್ಗ ಕಂಡುಕೊಳ್ಳದಿದ್ದರೆ ಬ್ರಿಟಿಷರ ಆಡಳಿತಕ್ಕಿಂತ ಹೀನಾಯ ಸ್ಥಿತಿ ನಿರ್ಮಾಣ: ಶಾನುಭಾಗ್

ಉಡುಪಿ, ಜೂ.20: ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕ ದಾರಿಗಳಿವೆ. ಅದರ ಮುಂದಾ ಳತ್ವ ವಹಿಸಿಕೊಳ್ಳಲು ಶಿಕ್ಷಕರು ಆಸಕ್ತಿ ತೋರುತ್ತಿಲ್ಲ. ಶಿಕ್ಷಕರು ಅನ್ಯಾಯದ ವಿರುದ್ಧ ಮಾತನಾಡಬೇಕು. ಆ ನಿಟ್ಟಿನಲ್ಲಿ ಮಕ್ಕಳನ್ನು ತರಬೇತಿಗೊಳಿಸಬೇಕು. ನ್ಯಾಯಕ್ಕಾಗಿ ಸರಿಯಾದ ಮಾರ್ಗವನ್ನು ನಾವು ಕಂಡುಕೊಳ್ಳದಿದ್ದರೆ ಬ್ರಿಟಿಷರ ಆಡಳಿತಕ್ಕಿಂತ ಹೀನಾಯ ಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರ ನಾಥ್ ಶಾನುಭಾಗ್ ಹೇಳಿದ್ದಾರೆ.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಕಾರ್ಯಕ್ರಮದ ಉದ್ಘಾಟನೆ ಹಾಗೂ ಮತ್ತು ವೆಬ್‌ಸೈಟ್ ಅನಾವರಣವನ್ನು ನೆರವೇರಿಸಿ ಅವರು ಮಾತನಾಡುತಿದ್ದರು.

ಶಾಸಕರು, ಸಂಸದರು, ಅಧಿಕಾರಿಗಳು ನಮ್ಮ ಸೇವಕರೇ ಹೊರತು ನಾವು ಅವರ ಅಡಿಯಾಳು ಅಲ್ಲ. ನಮ್ಮ ಜನಪ್ರತಿನಿಧಿಗಳಿಗೆ ಜನಪರ ಕಾಳಜಿ ಇಲ್ಲದಿದ್ದರೆ ಅವರಿಂದ ಯಾವುದೇ ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಅವರು ಆರೋಪಿಸಿದರು.

ಬೀದಿನಾಯಿಗಳ ಕಡಿತದಿಂದ ಮಕ್ಕಳು ಸಾಯುತ್ತಿದ್ದಾರೆ. ನಾಯಿಗಳನ್ನು ನಿಯಂತ್ರಣ ಮಾಡುವ ಬಗ್ಗೆ ಸಾಕಷ್ಟು ಪ್ರಯೋಗಗಳು ಆದರೂ ಕೂಡ ಕರ್ನಾಟಕದಲ್ಲಿ ಇನ್ನೂ ಅದನ್ನು ಅನುಷ್ಠಾನ ಮಾಡುತ್ತಿಲ್ಲ. ಈ ಬಗ್ಗೆ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸರಕಾರ, ಜನಪ್ರತಿನಿಧಿಗಳಿಗೆ ಈ ಬಗ್ಗೆ ಇಚ್ಛಾಶಕ್ತಿಯ ಕೊರತೆ ಇದೆ ಎಂದು ಅವರು ಟೀಕಿಸಿದರು.

ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿಯನ್ನು ನಿವೃತ್ತ ಪ್ರಾಧ್ಯಾಪಕ, ಪರಿಸರ ಹಾಗೂ ಕೃಷಿ ಲೇಖಕ ಎನ್. ನರೇಂದ್ರ ರೈ ದೆರ್ಲ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇಡೀ ಪ್ರಪಂಚವನ್ನು 15 ಬಾರಿ ಸರ್ವ ನಾಶ ಮಾಡುವಷ್ಟು ಅಣು ಬಾಂಬುಗಳು ವಿವಿಧ ದೇಶಗಳಲ್ಲಿ ಇವೆ. ಆದರೆ ಜಗತ್ತಿನ 800 ಕೋಟಿ ಜನರಿಗೆ ಬೇಕಾದ ಪರಿಶುದ್ಧವಾದ ಕುಡಿಯುವ ನೀರು, ಆಮ್ಲಜನಕ, ವಿಷ ಸೇರದ ಅನ್ನ, ಮಣ್ಣು ನಮ್ಮಲ್ಲಿ ಇಲ್ಲ. ಅನ್ನ, ಮಣ್ಣು, ನೀರಿಗೆ ವಿಷ ಹಾಕಿರುವುದು ನಾವೇ ಹೊರತು ಯಾವುದೇ ಪ್ರಾಣಿ, ಪಕ್ಷಿಗಳಲ್ಲ ಎಂದರು.

ಟ್ರಸ್ಟ್‌ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಶಾಲೆಗಳನ್ನು ಉಳಿಸುವ ಬಗ್ಗೆ ಯಾರಿಗೂ ಆಸಕ್ತಿ ಇಲ್ಲ. ಕನ್ನಡ ಶಾಲೆಗಳು ನಮ್ಮ ಭಾಷೆಯ ನರನಾಡಿಯಾಗಿದ್ದು, ಅದನ್ನು ಉಳಿಸುವುದು ಅತೀ ಅಗತ್ಯ ವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಜಿಲ್ಲಾ ಅನುದಾನಿತ ಪ್ರೌಢಶಾಲೆಗಳ ನೌಕರರ ಸಂಘದ ಅಧ್ಯಕ್ಷ ಡಾ.ಜಯಶೀಲ ಶೆಟ್ಟಿ ಕಂದಾವರ ಮಾತನಾಡಿದರು.

ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಪ್ರಾಥಮಿಕ ಅನುದಾನಿತ ಶಾಲಾ ಸಂಘದ ಅಧ್ಯಕ್ಷ ಕೆ.ಅರುಣ್ ಕುಮಾರ್ ಶೆಟ್ಟಿ, ಟ್ರಸ್ಟ್‌ನ ಉಪಾಧ್ಯಕ್ಷ ಹಾಲಾಡಿ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು. ದಾಮೋದರ ಶರ್ಮ ಬಾರಕೂರು ಕಾರ್ಯಕ್ರಮ ನಿರೂಪಿಸಿದರು.

‘ಕಳೆದ ಐದು ವರ್ಷಗಳಲ್ಲಿ ನಮ್ಮ ದೇಶದ ಜನರ ಮನಸ್ಸು ಬದಲಾಗಿದೆ. ತರಗತಿ ಒಳಗೆ ಒಂದು ಗಂಟೆ ಕೂರಲು ಆಗದ ವಿದ್ಯಾರ್ಥಿಗಳನ್ನು ನಾವು ನೋಡುತ್ತಿದ್ದೇವೆ. ಅವರ ಒಳಗಿನ ಸಂವೇದನ, ಭಾವನೆ, ಮನುಷ್ಯ ಪ್ರೀತಿ, ತಾಳ್ಮೆ ಸತ್ತು ಹೋಗಿದೆ. ಆ ಮೂಲಕ ಸಂವೇದನಾ ಶೂನ್ಯರಾಗುತ್ತಿದ್ದಾರೆ. ಆದುದರಿಂದ ಶಿಕ್ಷಕರು ಮಕ್ಕಳ ಮನಸ್ಸಿನ ಯಂತ್ರವನ್ನು ಕಳಚಿ, ಅವರ ಒಳಗಡೆ ಮನುಷ್ಯತ್ವ, ಸಂಸ್ಕೃತಿಯನ್ನು ತುಂಬುವ ಕಾರ್ಯ ಮಾಡಬೇಕು’

-ನರೇಂದ್ರ ರೈ ದೆರ್ಲ, ಲೇಖಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X