Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಶೋಧನೆ ಎಂಬುದು ಪದವಿಗೆ...

ಸಂಶೋಧನೆ ಎಂಬುದು ಪದವಿಗೆ ಸೀಮಿತವಾಗಿರಬಾರದು: ಪ್ರೊ.ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ20 Jun 2026 8:33 PM IST
share
ಸಂಶೋಧನೆ ಎಂಬುದು ಪದವಿಗೆ ಸೀಮಿತವಾಗಿರಬಾರದು: ಪ್ರೊ.ವಿವೇಕ ರೈ
ಪೊಳಲಿ ಶೀನಪ್ಪ ಹೆಗ್ಡೆ - ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ

ಉಡುಪಿ, ಜೂ.20: ಇಂದು ಸಂಶೋಧನೆ ಎಂಬುದು ಕೇವಲ ಪದವಿಗೆ ಸೀಮಿತವಾಗಿರುತ್ತದೆ. ಒಮ್ಮೆ ತನ್ನ ಸಂಶೋಧನೆಗೆ ಪಿಎಚ್‌ಡಿ ಪದವಿ ಸಿಕ್ಕಿದ ಬಳಿಕ ಅವರು ಅದನ್ನು ಮರೆತು ಬಿಡುತ್ತಾರೆ. ಈ ಬಗ್ಗೆ ಏನನ್ನೂ ಬರೆಯು ವುದಿಲ್ಲ ಎಂದು ನಿವೃತ್ತ ಕುಲಪತಿ, ಜಾನಪದ ವಿದ್ವಾಂಸ ಪ್ರೊ.ಬಿ.ಎ.ವಿವೇಕ ರೈ ವಿಷಾಧಿಸಿದ್ದಾರೆ.

ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಚೇಳಾರು ಗುತ್ತು ಎಸ್.ಆರ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇವುಗಳ ಸಹಯೋಗದಲ್ಲಿ ಮಂಗಳೂರಿನ ಡಾ.ಬಿ.ಶಿವರಾಮ ಶೆಟ್ಟಿ ಇವರಿಗೆ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್.ಹೆಗ್ಡೆ ಪ್ರಶಸ್ತಿ-2026ನ್ನು ಪ್ರದಾನ ಮಾಡಿ ಅವರು ಮಾತನಾಡುತಿದ್ದರು.

ಇಂದು ಸಂಶೋಧನೆಗೆ ಆಸಕ್ತಿಯೊಂದಿಗೆ ಬರುವವರ ಸಂಖ್ಯೆ ತೀರಾ ಕಡಿಮೆ ಯಾಗಿದೆ. ಕನ್ನಡ ಭಾಷೆ, ಸಂಸ್ಕೃತಿಯ ಬಗ್ಗೆ ಸಂಶೋಧನೆಗೆ ಈಗಲೂ ವಿಪುಲ ಅವಕಾಶಗಳಿವೆ. ಪ್ರಾದೇಶಿಕ ಸಂಸ್ಕೃತಿಯ ಬಗ್ಗೆ, ದೇಶೀಯ ವಿದ್ವತ್ತಿನ ಬಗ್ಗೆ ಇಂದಿನ ದೃಷ್ಟಿಯಲ್ಲಿ ಮರು ವಿಮರ್ಶೆ ನಡೆಸಲು ಸಾಧ್ಯವಿದೆ ಎಂದವರು ಹೇಳಿದರು.

ಪೊಳಲಿ ಶೀನಪ್ಪ ಹೆಗ್ಡೆ ಅವರು ತುಳು ಚಳವಳಿಯ ಭಾಗವಾಗಿದ್ದವರು. ಅವರ ಬದುಕು ಮತ್ತು ಬರಹಗಳು ಎಂದೂ ಮಾದರಿಯಾಗಿರುವಂತದ್ದು. ಸ್ವಾತಂತ್ರ್ಯಪೂರ್ವದಿಂದಲೇ ಅವರು ತುಳುನಾಡಿನ ಕುರಿತು ಅನೇಕ ಸಂಶೋಧನೆ ನಡೆಸಿ ಕೃತಿಗಳನ್ನು ನೀಡಿದವರು. ಆ ಸಂದರ್ಭದಲ್ಲಿ ಅವರು ಅನೇಕ ಹೊಳಹುಗಳನ್ನು ನೀಡಿ ಮುಂದಿನ ಅಧ್ಯಯನ ಕಾರರಿಗೆ ದಾರಿದೀಪವಾಗಿದ್ದಾರೆ. ಗದ್ಯರೂಪದಲ್ಲಿ ತುಳುನಾಡಿನ ಜನಪದ ಸಂಪತ್ತನ್ನು ಮುಖ್ಯವಾಗಿ ಪಾಡ್ದನದ ಕಥೆಗಳನ್ನು ಸಂಗ್ರಸಿ ಜಾನಪದ ಅದ್ಯಯನಕಾರರಿಗೆ ಮಾರ್ಗದರ್ಶಿ ಸೂತ್ರವನ್ನುನೀಡಿದ್ದಾರೆ ಎಂದು ಡಾ.ವಿವೇಕ ರೈ ವಿವರಿಸಿದರು.

ಈ ಬಾರಿಯ ಪೊಳಲಿ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಮಂಗಳೂರಿ ನ ಹಿರಿಯ ಲೇಖಕ, ಸಂಶೋಧಕ ಡಾ.ಬಿ. ಶಿವರಾಮ ಶೆಟ್ಟಿ ಅವರು ‘ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು’ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು.

ಸಂಶೋಧನೆ ಎಂಬುದು ಸತ್ಯದ ಸಾಕ್ಷಾತ್ಕಾರ. ಸಂಶೋಧನೆ ಎಂದರೆ ಹೊಸತನ್ನು ಹೇಳುವುದು. ಇಲ್ಲದ್ದನ್ನೂ ಹೇಳುವುದಲ್ಲ, ಇರುವುದನ್ನು ಹೇಳುವುದು. ಆಳವಾದ ಅಭ್ಯಾಸದ ಫಲವಾಗಿ ಒಡಮೂಡುವ ಶಿಷ್ಟ ಸತ್ಯ. ಈ ಬಗೆಯ ಸತ್ಯದ ಹೊಳಹು ಕಾಲಾತೀತವಾಗಿರುತ್ತದೆ. ಅವುಗಳಿಂದ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದರು.

ತುಳುನಾಡಿನ ಮಾತೃಪ್ರಧಾನ ಸಮಾಜದ ಅಳಿಯಸಂತಾನ ಕಟ್ಟಿನ ಪರಂಪರೆಯನ್ನು ವೈಭವೀಕರಿಸುವ ಪ್ರಯತ್ನ ನಡೆಯುತಿದ್ದು, ಇದರ ಬಗ್ಗೆ ಮರು ಪರಿಶೀಲನೆ ನಡೆಯಬೇಕಾದ ಅಗತ್ಯವಿದೆ. ಇದು ಹೆಣ್ಣಿಗೆ ಪ್ರಾಧಾನ್ಯತೆಯನ್ನು ಕೊಡುವ ಕುಟುಂಬ ಪದ್ಧತಿ. ಆಸ್ತಿಯನ್ನು ಕುಟುಂಬದಲ್ಲಿ ನಿರಂತರವಾಗಿ ಉಳಿಸಿಕೊಳ್ಳುವ ಉದ್ದೇಶ ಇದರಲ್ಲಿ ಕಾಣಬಹುದು ಎಂದರು.

ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಚೇತನ್ ಮುಂಡಾಜೆ ಅವರು ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಎಂ.ಜಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಜಿ. ಪೈ ಉಪಸ್ಥಿತರಿದ್ದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು.ಪ್ರಶಸ್ತಿಯ ಪ್ರಾಯೋಜಕರಾದ ಚೇಳಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷೆ ಡಾ. ಇಂದಿರಾ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಆರ್.ಸಿಯ ಸಹಸಂಶೋಧಕ ಡಾ.ಅರುಣ್‌ಕುಮಾರ್ ಎಸ್.ಆರ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X