Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುರ್ಡೇಶ್ವರ-ಕಾಚಿಗುಡಾ ರೈಲು ಕುಮಟಾಕ್ಕೆ...

ಮುರ್ಡೇಶ್ವರ-ಕಾಚಿಗುಡಾ ರೈಲು ಕುಮಟಾಕ್ಕೆ ವಿಸ್ತರಣೆ; ಸಂಸದ ಕಾಗೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 Jun 2026 9:47 PM IST
share
ಮುರ್ಡೇಶ್ವರ-ಕಾಚಿಗುಡಾ ರೈಲು ಕುಮಟಾಕ್ಕೆ ವಿಸ್ತರಣೆ; ಸಂಸದ ಕಾಗೇರಿ ಉದ್ಘಾಟನೆ

ಉಡುಪಿ, ಜೂ.20: ಕೊಂಕಣ ರೈಲ್ವೆಯ ಮುರ್ಡೇಶ್ವರ-ಕಾಚಿಗುಡಾ ಎಕ್ಸ್‌ಪ್ರೆಸ್ ರೈಲನ್ನು ಕುಮಟಾದವರೆಗೆ ವಿಸತರಿಸಲಾಗಿದ್ದು, ಅದರ ಉದ್ಘಾಟನೆ ಇಂದು ಬೆಳಗ್ಗೆ ಕುಮಟಾ ರೈಲು ನಿಲ್ದಾಣದಲ್ಲಿ ನಡೆಯಿತು.

ಕಾಚಿಗುಡ-ಮುರ್ಡೇಶ್ವರ-ಕಾಚಿಗುಡಾ ರೈಲು ವಾರಕ್ಕೆರಡು ಬಾರಿ ಸಂಚರಿಸುತಿದ್ದು, ಅದನ್ನು ಕುಮಟಾವರೆಗೆ ವಿಸ್ತರಿಸಲಾಗಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕುಮಟಾ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ಈ ರೈಲನ್ನು ಉದ್ಘಾಟಿಸಿದರು.

ಇದರೊಂದಿಗೆ ಕುಮಟಾ, ಗೋಕರ್ಣ, ಮುರ್ಡೇಶ್ವರ ಹಾಗೂ ಭಟ್ಕಳ ರೈಲು ನಿಲ್ದಾಣಗಳಲ್ಲಿ ಒದಗಿಸಿರುವ ಪ್ರಯಾ ಣಿಕರ ಸೌಲಭ್ಯಗಳನ್ನು ಸಹ ಸಂಸದ ಕಾಗೇರಿ ಉದ್ಘಾಟಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸುವುದು, ಪ್ರಯಾಣಿಕರಿಗೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವುದು ಕೇಂದ್ರ ಸರಕಾರದ ಗುರಿಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕಾರವಾರದ ಶಾಸಕ ದಿನಕರ ಕೆ.ಶೆಟ್ಟಿ, ಉತ್ತರ ಕನ್ನಡದ ವಿಧಾನಪರಿಷತ್ ಸದಸ್ಯರಾದ ಕಾರವಾರದ ಗಣಪತಿ ಡಿ.ಉಳ್ವೇಕರ್, ಯಲ್ಲಾಪುರದ ಶಾಂತರಾಮ ಸಿದ್ಧಿ, ಶಿರಸಿಯ ಶಾಸಕ ಭೀಮಣ್ಣ ನಾಯ್ಕ್, ಕೊಂಕಣ ರೈಲ್ವೆಯ ಅಧ್ಯಕ್ಷ ಹಾಗೂ ಎಂಡಿ ಸಂತೋಷ್‌ಕುಮಾರ್ ಝಾ, ಕಾರವಾರದ ಪ್ರಾದೇಶಿಕ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇಂದು ಉದ್ಘಾಟನೆಗೊಂಡ ವಿವಿಧ ಸೌಲಭ್ಯಗಳಲ್ಲಿ ಕುಮಟಾ ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂನ ನಂ.2ರ ಉನ್ನತೀಕರಮ, ಗೋಕರ್ಣ ರೋಡ್ ನಿಲ್ದಾಣದಲ್ಲೂ ಪ್ಲಾಟ್‌ಫಾರಂ ನಂ.1ರ ಉನ್ನತೀಕರಣ, ಮುರ್ಡೇಶ್ವರದಲ್ಲಿ ಬಯೋಟಾಯ್ಲೆಟ್ ಸೌಲಭ್ಯ, ಭಟ್ಕಳದಲ್ಲಿ ಪ್ಲಾಟ್‌ಫಾರಂ ನಂ.2ರ ಉನ್ನತೀಕರಣ ಸೇರಿವೆ.

ಮುರ್ಡೆಶ್ವರ ಕಾಚಿಗುಡ ರೈಲು ಸಂಚಾರವನ್ನು ಕುಮಟಾವರೆಗೆ ವಿಸ್ತರಿಸುವ ಮೂಲಕ ಕರ್ನಾಟಕ ಮತ್ತು ತೆಲಂಗಾಣ ನಡುವೆ ರೈಲು ಸೇವೆಯನ್ನು ಇನ್ನಷ್ಟು ವಿಸ್ತರಿಸುವ ಗುರಿ ಹೊಂದಲಾಗಿದೆ. ಕುಮಟಾದಿಂದ ತಿರುಪತಿಗೆ ನೇರ ಸಂಪರ್ಕ ದೊರೆಯುವಂತಾಗಿದೆ. ಇದು ಇಲ್ಲಿನ ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್‌ಕುಮಾರ್ ಝಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X