ಕಾರ್ಕಳ | ಎಸ್‌ವಿಟಿ ಯಕ್ಷಗಾನ ಕೇಂದ್ರ ಉದ್ಘಾಟನೆ

ಕಾರ್ಕಳ : ಕಾರ್ಕಳ ಎಸ್ ವಿ ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಯಕ್ಷಗಾನ ಕೇಂದ್ರದ ಉಚಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಕಾರ್ಕಳ ಎಸ್ ವಿ ಟಿ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.
ಎಸ್ ವಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ, ಮಾಜಿ ಪುರಸಭಾ ಅಧ್ಯಕ್ಷ ಕೆ. ಪಿ. ಶೆಣೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟನೆ ನೆರವೇರಿಸಿದರು.
ಯಕ್ಷಗಾನ ಕೇಂದ್ರದ ನಿರ್ದೇಶಕರಾದ ಎಸ್. ರಾಮ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಎಸ್ ವಿ ಟಿ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ನಡೆದು ಬಂದ ರೀತಿಯನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಎಸ್ ವಿ ಟಿ ಪ್ರೌಢಶಾಲಾ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್, ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ., ಎಸ್ ವಿ ಟಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಹೆಚ್. ಜಿ. ಬಂಡಿವಡ್ಡರ್ ಉಪಸ್ಥಿತರಿದ್ದರು.
ಯಕ್ಷಗಾನ ಕೇಂದ್ರದ ಗುರುಗಳಾದ ಅಜಿತ್ ಕುಮಾರ್ ಜೈನ್ ವಂದಿಸಿದರು. ಶಿಕ್ಷಕ ಸುನಿಲ್ ಎಸ್. ಶೆಟ್ಟಿ ಸ್ವಾಗತಿಸಿದರು. ದೇವದಾಸ್ ಕೆರೆಮನೆ ನಿರೂಪಿಸಿದರು.
Next Story




