Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಿಳಾ ಉದ್ದಿಮೆದಾರರು, ಸಂಜೀವಿನಿ ಸಂಘಗಳ...

ಮಹಿಳಾ ಉದ್ದಿಮೆದಾರರು, ಸಂಜೀವಿನಿ ಸಂಘಗಳ ಉದ್ಯಮಕ್ಕೆ ಬ್ಯಾಂಕ್‌ಗಳಲ್ಲಿ ಆದ್ಯತೆ: ಪ್ರತೀಕ್ ಬಾಯಲ್

ವಾರ್ತಾಭಾರತಿವಾರ್ತಾಭಾರತಿ22 Jun 2026 8:23 PM IST
share
ಮಹಿಳಾ ಉದ್ದಿಮೆದಾರರು, ಸಂಜೀವಿನಿ ಸಂಘಗಳ ಉದ್ಯಮಕ್ಕೆ ಬ್ಯಾಂಕ್‌ಗಳಲ್ಲಿ ಆದ್ಯತೆ: ಪ್ರತೀಕ್ ಬಾಯಲ್
ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

ಉಡುಪಿ ಜೂ.22: ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮ ಗಳ ವಿಶ್ವಾಸವನ್ನು ಹೆಚ್ಚಿಸುವ ಕೆಲಸ ಇಲಾಖೆಗಳು ಮಾಡಬೇಕು. ಇವುಗಳ ಜೊತೆಗೆ ಬ್ಯಾಂಕುಗಳು ಮಹಿಳಾ ಉದ್ಯಮದಾರರಿಗೆ ಹಾಗೂ ಸಂಜೀವಿನಿ ಒಕ್ಕೂಟದವರಿಗೆ ಹೆಚ್ಚಿನ ಆರ್ಥಿಕ ನೆರವನ್ನು ನೀಡುವುದರೊಂದಿಗೆ ಉದ್ಯಮಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ 15,000ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಬಹು ತೇಕ ಗೋಡಂಬಿ ಸಂಸ್ಕರಣಾ ಘಟಕಗಳು, ಮೆರಿನ್ ಪ್ರೋಕ್ಟ್, ಸಿದ್ಧ ಆಹಾರ ಘಟಕಗಳು ಸೇರಿದಂತೆ ಮತ್ತಿತರ ಕೈಗಾರಿಕೆಗಳಾಗಿವೆ. ಇವುಗಳ ಮೂಲಭೂತ ಸೌಕರ್ಯ ಸೇರಿದಂತೆ ಅವಶ್ಯಕತೆ ಇದ್ದಲ್ಲಿ ಬ್ಯಾಂಕುಗಳು ಆರ್ಥಿಕ ನೆರವನ್ನು ನೀಡಬೇಕು. ಮಾಲಕರು ಆರ್ಥಿಕ ನೆರವನ್ನು ಪಡೆಯಲು ಎಂಎಸ್‌ಎಇನಲ್ಲಿ ನೋಂದಣಿ ಮಾಡಿಸ ಬೇಕು ಎಂದರು.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸರಿಯಾದ ಸಹಕಾರ ಬ್ಯಾಂಕುಗಳಲ್ಲಿ ಸಿಗುತ್ತಿಲ್ಲ ಎಂಬ ದೂರುಗಳು ಸಹ ಕೇಳಿ ಬರುತ್ತಿವೆ. ಹೀಗಾಗದಂತೆ ಬ್ಯಾಂಕಿಂಗ್ ವಲಯಗಳು ಎಚ್ಚರವಹಿಸಬೇಕು. ಮಹಿಳಾ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಕೋರಿ ಬ್ಯಾಂಕುಗಳಿಗೆ ಬಂದಾಗ ಅವರುಗಳಿಗೆ ಅಗತ್ಯ ನೆರವುಗಳನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.

ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಸಾಕಷ್ಟು ಕಾಲಾವಕಾಶ ಕಲ್ಪಿಸಿ, ಈ ಬಗ್ಗೆ ಹೆಚ್ಚು ಅರಿವು ಮೂಡಿಸಿ, ಹೆಚ್ಚಿನ ರೈತರು ಇದರ ವ್ಯಾಪ್ತಿಗೆ ತರುವಂತೆ ನೋಡಿ ಕೊಳ್ಳಬೇಕು. ವಿಮೆ ಪ್ರೀಮಿಯಂ ಹಣವನ್ನು ತುಂಬಲು ಪ್ರತಿಯೊಬ್ಬ ರೈತರಿಗೂ ಅವಕಾಶ ಕಲ್ಪಿಸಬೇಕು. ಒಂದೊಮ್ಮೆ ತಾಂತ್ರಿಕ ಸಮಸ್ಯೆ ಗಳು ಕಂಡುಬಂದಲ್ಲಿ ಕೂಡಲೇ ಅದನ್ನು ಬಗೆಹರಿಸಿ, ವಿಮಾ ವ್ಯಾಪ್ತಿಗೆ ಹೊಂದುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಾಯೋಜಿತ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಬ್ಯಾಂಕು ಗಳ ಪಾತ್ರ ಮಹತ್ವದ್ದಾಗಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಸರಕಾರದ ನಾನಾ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿ ಗಳು ಮತ್ತು ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡಬೇಕು. ಫಲಾನುಭವಿಗಳ ಅರ್ಜಿ ಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆ ಇದ್ದಲ್ಲಿ ಅದನ್ನು ಸರಿಪಡಿಸು ವುದರೊಂದಿಗೆ ಅವಶ್ಯಕತೆ ಇರುವವರಿಗೆ ಆದ್ಯತೆಯ ಮೇಲೆ ಆರ್ಥಿಕ ನೆರವು ಒದಗಿಸಬೇಕು ಎಂದರು.

ಸಭೆಯಲ್ಲಿ ಆರ್‌ಬಿಐ ಇದರ ಎಜಿಎಂ ನಿಶಾ ಠಾಕೂರ್, ನಬಾರ್ಡ್‌ನ ಡಿಡಿಎಂ ಸಂಗೀತಾ ಕಾರ್ಥಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಮೊದಲಾದವರು ಉಪಸ್ಥಿತರಿದ್ದರು.

ಶೇ.110.81 ವಾರ್ಷಿಕ ಕ್ರೆಡಿಟ್ ಯೋಜನೆ ಗುರಿ

ಕಳೆದ ಸಾಲಿನಲ್ಲಿ ಜಿಲ್ಲೆಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯ ಗಳೆರಡಕ್ಕೂ ಒಟ್ಟಾರೆಯಾಗಿ 15,514.08 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, 2026ರ ಮಾರ್ಚ್ ಅಂತ್ಯದ ವರೆಗೆ 17,191.28 ಗುರಿ ಸಾಧಿಸಿ, ಶೇ.110.81 ಸಾಧನೆ ಮಾಡಲಾಗಿದೆ ಎಂದು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಉಪ ಮಹಾ ಪ್ರಬಂಧಕ ಮಹಾಮಾಯ ಪ್ರಸಾದ್ ತಿಳಿಸಿದ್ದಾರೆ.

ಕೃಷಿ ವಲಯದಲ್ಲಿ 4230.28 ನಿಗಧಿತ ಗುರಿಗೆ 4738.22 ಗುರಿ ಸಾಧಿಸಿ ಶೇ.112.01, ಎಂ.ಎಸ್.ಎಂ.ಇ ವಲಯಕ್ಕೆ 3712.58 ನಿಗಧಿತ ಗುರಿಗೆ 3709.94 ಗುರಿ ಸಾಧಿಸಿ ಶೇ. 99.93 ರಷ್ಟು, ಶಿಕ್ಷಣ ವಲಯದಲ್ಲಿ 187.07 ನಿಗಧಿತ ಗುರಿಗೆ 168.75 ಗುರಿ ಸಾಧಿಸಿ ಶೇ.90.21ರಷ್ಟು, ವಸತಿ ಕ್ಷೇತ್ರಗಳಿಗೆ 510 ನಿಗಧಿತ ಗುರಿಗೆ 270.92 ಗುರಿ ಸಾಧಿಸಿ ಶೇ.53.12ರಷ್ಟು, ಇತರೆ ಕ್ಷೇತ್ರಗಳಿಗೆ 395.31 ನಿಗಧಿತ ಗುರಿಗೆ, 407.77 ಗುರಿ ಸಾಧಿಸಿ ಶೇ. 103.15 ಹಾಗೂ ಆದ್ಯತೇತರ ವಲಯಗಳಿಗೆ 6474.31 ನಿಗಧಿತ ಗುರಿಗೆ, 7890.36 ಗುರಿ ಸಾಧಿಸಿ ಶೇ.121.87ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಬ್ಯಾಂಕ್‌ಗಳ ಸಾಲ-ಠೇವಣಿ ಅನುಪಾತ ಇಳಿಕೆ

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಬ್ಯಾಂಕ್‌ಗಳ ಸಾಲ ಮತ್ತು ಠೇವಣಿ ಅನುಪಾತ ಶೇ.48.99 ಇದ್ದು, ಈ ಪ್ರಮಾಣವು ರಿಸರ್ವ್ ಬ್ಯಾಂಕ್ ಮಾರ್ಗಸೂಚಿಯಂತೆ ಕನಿಷ್ಠ ಶೇ.60 ಇರಬೇಕಾಗಿದೆ. ಬ್ಯಾಂಕ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಸೌಲಭ್ಯಗಳನ್ನು ವಿತರಣೆ ಮಾಡಬೇಕು. ವಸತಿ, ಶೈಕ್ಷಣಿಕ ಉದ್ದೇಶ, ಸ್ವ-ಉದ್ಯೋಗ ಕೈಗೊಳ್ಳುವವರು, ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಆದಷ್ಟು ಸೌಲಭ್ಯ ಕಲ್ಪಿಸಬೇಕು ಎಂದು ಜಿಪಂ ಸಿಇಓ ಪ್ರತೀಕ್ ಬಾಯಲ್ ತಿಳಿಸಿದರು.

ಪಿ.ಎಂ.ಎಫ್.ಎಅ.ಇ ಯೋಜನೆಯಡಿ 516 ಫಲಾನುಭವಿಗಳಿಗೆ 59.34 ಕೋಟಿ ರೂ. ಹಾಗೂ ಪಿ.ಎಂ.ಎಸ್.ಜಿ.ಎ ಅ.ಬಿ.ವೈ ಅಡಿಯಲ್ಲಿ ಕಳೆದ ಸಾಲಿನಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳಿಗೆ 837 ಅರ್ಜಿಗಳು ಸಲ್ಲಿಕೆ ಯಾಗಿದ್ದು, 229 ಅರ್ಜಿಗಳು ತಿರಸ್ಕೃತಗೊಂಡು, 558 ಫಲಾನುಭವಿಗಳಿಗೆ 8.20ಕೋಟಿ ರೂ. ಆರ್ಥಿಕ ನೆರವನ್ನು ಮಂಜೂರು ಮಾಡಲಾಗಿದೆ. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಏಪ್ರಿಲ್ ವರೆಗೆ 5889 ಅರ್ಜಿಗಳು ಸ್ವೀಕೃತವಾಗಿದ್ದು, 4079 ಫಲಾನುಭವಿಗಳಿಗೆ 37.16ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X