Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್ ಮ್ಯಾಪಿಂಗ್‌ನಲ್ಲಿ ಕಾರ್ಕಳ...

ಎಸ್‌ಐಆರ್ ಮ್ಯಾಪಿಂಗ್‌ನಲ್ಲಿ ಕಾರ್ಕಳ ತಾಲೂಕಿಗೆ ಅಗ್ರಸ್ಥಾನ: ಉಡುಪಿ ಡಿಸಿ ಸ್ವರೂಪ ಟಿ. ಕೆ

ವಾರ್ತಾಭಾರತಿವಾರ್ತಾಭಾರತಿ24 Jun 2026 8:28 PM IST
share
ಎಸ್‌ಐಆರ್ ಮ್ಯಾಪಿಂಗ್‌ನಲ್ಲಿ ಕಾರ್ಕಳ ತಾಲೂಕಿಗೆ ಅಗ್ರಸ್ಥಾನ: ಉಡುಪಿ ಡಿಸಿ ಸ್ವರೂಪ ಟಿ. ಕೆ

ಉಡುಪಿ, ಜೂ.24: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಶೇ.96ರಷ್ಟು ಸಾಧನೆ ಮಾಡಿರುವ ಕಾರ್ಕಳ ತಾಲೂಕು ಜಿಲ್ಲೆಯಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಬುಧವಾರ ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026ಕ್ಕೆ ಸಂಬಂಧಿಸಿದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್‌ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ತಾಲೂಕಿನ ಸುಮಾರು 5 ಸಾವಿರದಷ್ಟು ಮಂದಿ ಉದ್ಯೋಗ ಅಥವಾ ಅನ್ಯ ಕಾರಣ ನಿಮಿತ್ತ ತಾಲೂಕಿನಿಂದ ಹೊರಗಿದ್ದು ಇವರ ಹೆಸರುಗಳನ್ನು ಸಹ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಬಿಎಲ್‌ಓಗಳಿಗೆ ಸೂಚನೆ ನೀಡಿದರು.

ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆ ಬಹುತೇಕ ಪೂರ್ಣ ಗೊಂಡಿದ್ದು, ಹೆಸರು ಬಿಟ್ಟು ಹೋದವರನ್ನು ಪಟ್ಟಿ ಯಲ್ಲಿ ಸೇರಿಸುವ ಜವಾಬ್ದಾರಿ ಆಯಾ ಬಿಎಲ್‌ಓಗಳ ಮೇಲಿದೆ. ಪರಿಷ್ಕರಣೆ ಸಮಯದಲ್ಲಿ ಎದುರಾಗುವ ಸಮಸ್ಯೆ ಗಳನ್ನು ಅವರು ಜಿಲ್ಲಾಡಳಿತದ ಗಮನಕ್ಕೆ ತರಬೇಕು. 18 ವರ್ಷ ಮೀರಿದ ಭಾರತೀಯ ಪ್ರಜೆಯಾಗಿರುವ ಪ್ರತಿ ಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ದೇಶದಲ್ಲಿ 2002 ರಲ್ಲಿ ಕೊನೆಯ ಬಾರಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದೆ. ಆ ಬಳಿಕ ಹಳ್ಳಿಗಳು ನಗರಗಳಾಗಿ ಬೆಳೆದು, ಜನಸಂಖ್ಯೆಯೂ ಹೆಚ್ಚಾಗಿದೆ. ಮತದಾರ ರನ್ನು ಗುರುತಿಸಲು ಎಸ್‌ಐಆರ್ ಪ್ರಕ್ರಿಯೆ ನಡೆಸುವುದು ಅತ್ಯವಶ್ಯಕವಾಗಿದೆ. ಕೇವಲ ಭಾರತೀಯ ನಾಗರಿಕರು ಮಾತ್ರ ಸಂವಿಧಾನಬದ್ಧ ಮತದಾನ ಮಾಡುವ ಹಕ್ಕನ್ನು ಹೊಂದಬೇಕು ಎನ್ನುವ ಉದ್ದೇಶದಿಂದ ಈ ಪ್ರಕ್ರಿಯೆ ಯನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಮುಖ್ಯವಾಗಿ ಬಿಎಲ್‌ಓ ಮತ್ತು ಬಿಎಲ್‌ಎಗಳ ಮಧ್ಯೆ ಸಮನ್ವಯ ಸಾಧಿಸಲು ತಾಲೂಕು ಮಟ್ಟದಲ್ಲಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿ ಕೊಳ್ಳಲಾಗುತ್ತಿದೆ. ನೈಜ ಮತ್ತು ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡು ಪ್ರಕ್ರಿಯೆಯಲ್ಲಿ ಎದುರಾಗುವ ಸಮಸ್ಯೆ ಗಳನ್ನು ಬಗೆಹರಿಸಬೇಕು. ತಾಲೂಕಿನ ಮತದಾರರ ಪಟ್ಟಿಯ ಮ್ಯಾಪಿಂಗ್ ಅತ್ಯುತ್ತಮವಾಗಿ ನಡೆದಿದ್ದು ಇದಕ್ಕೆ ಸಹಕರಿಸಿದ ಎಲ್ಲರೂ ಅಭಿನಂದನೆಗೆ ಅರ್ಹರು ಎಂದರು.

ಮತಗಟ್ಟೆ ಅಧಿಕಾರಿಗಳು ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಲಿದ್ದಾರೆ. ಆ ವೇಳೆ ನೀಡುವ ನಮೂನೆಯನ್ನು ಮತದಾರರು ಭರ್ತಿ ಮಾಡಿ ಈಗಿನ ಭಾವಚಿತ್ರ ಅಂಟಿಸಿ ಕಡ್ಡಾಯವಾಗಿ ಸಹಿ ಮಾಡಿ ಒಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಗೆ ಹಿಂದಿರುಗಿಸಬೇಕು. ಮತಗಟ್ಟೆ ಅಧಿಕಾರಿ ಗಳು ಒಟ್ಟು ಮೂರು ಬಾರಿ ಮನೆ ಬಾಗಿಲಿಗೆ ಭೇಟಿ ನೀಡಲಿದ್ದಾರೆ. ಆ ಸಂದರ್ಭದಲ್ಲಿ ನಮೂನೆಯನ್ನು ಭರ್ತಿ ಮಾಡಿ ನೀಡಬಹುದು. ಎಲ್ಲ ಮತದಾರರ ಹೆಸರು ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಕಾರ್ಕಳ ತಹಶೀಲ್ದಾರ್ ಪ್ರದೀಪ್, ನಗರಾಭಿವೃದ್ಧಿ ಕೋಶದ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕಿನ ಬಿಎಲ್‌ಓ, ಬಿಎಲ್‌ಎಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X