ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಮಣಿಪಾಲ, ಜೂ.24: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಬಡಗುಬೆಟ್ಟು ಗ್ರಾಮದ ಶರಣಪ್ಪ ತಂಡಿಗೇರಿ(44) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.22ರಂದು ರಾತ್ರಿ ಮನೆಯ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕಾರ್ಕಳ ಶ್ರೀನಿವಾಸ್ ನಗರದ ಎಸ್‌ವಿಟಿ ಶಾಲೆಯ ಬಳಿ ನಿವಾಸಿ ಚಂದ್ರದೇವಿ(38) ಎಂಬವರು ಜೂ.23ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




