Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಗೆ ಭಾ.ಕಿ.ಸಂ. ರಾ....

ಉಡುಪಿ ಜಿಲ್ಲೆಗೆ ಭಾ.ಕಿ.ಸಂ. ರಾ. ಅಧ್ಯಕ್ಷ ಸಾಯಿ ರೆಡ್ಡಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 Jun 2026 7:28 PM IST
share
ಉಡುಪಿ ಜಿಲ್ಲೆಗೆ ಭಾ.ಕಿ.ಸಂ. ರಾ. ಅಧ್ಯಕ್ಷ ಸಾಯಿ ರೆಡ್ಡಿ ಭೇಟಿ

ಉಡುಪಿ, ಜೂ.25: ಉಡುಪಿ ಜಿಲ್ಲೆಗೆ ಭಾರತೀಯ ಕಿಸಾನ್ ಸಂಘದ ಅಖಿಲ ಭಾರತ ಅಧ್ಯಕ್ಷರಾದ ಸಾಯಿ ರೆಡ್ಡಿ ಭೇಟಿ ನೀಡಿ ಸಂಘಟನೆಯ ಜಿಲ್ಲಾಸ್ತರದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಭಾರತೀಯ ಕಿಸಾನ್ ಸಂಘವು ಅಖಿಲ ಭಾರತ ಮಟ್ಟದ ರೈತ ಸಂಘಟನೆ ಯಾಗಿದ್ದು, ಪ್ರಸ್ತುತ ದೇಶಾದಾದ್ಯಂತ ಸುಮಾರು 82,000 ಗ್ರಾಮಗಳಲ್ಲಿ ಸಮಿತಿಗಳನ್ನು ಹೊಂದಿ, ರಾಷ್ಟ್ರ ಮಟ್ಟದ ಅತೀ ದೊಡ್ಡ ರೈತ ಸಂಘಟನೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

‘ಸಂಘಟನೆಯ ಬೇರು ಗ್ರಾಮದಲ್ಲಿದೆ. ಗ್ರಾಮಗಳಲ್ಲಿ ರೈತರು ಸಂಘಟಿತ ರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಂಡು ಸ್ವಾವಲಂಭಿಗಳಾಗಿ ಅರ್ಥಿಕ ಪ್ರಗತಿಯನ್ನು ಹೊಂದಿದಾಗ ಮಾತ್ರ ಈ ದೇಶ ಸಂಪದ್ಬರಿತವಾಗಲು ಸಾಧ್ಯ. ಅಂತಹ ಕಾರ್ಯವನ್ನ ಭಾರತೀಯ ಕಿಸಾನ್ ಸಂಘ ದೇಶದಾದ್ಯಂತ ಈವರೆಗೆ ಮಾಡುತ್ತಾ ಬಂದಿದೆ.’ ಎಂದು ಸಾಯಿ ರೆಡ್ಡಿ ತಿಳಿಸಿದರು.

2029ಕ್ಕೆ ಭಾರತೀಯ ಕಿಸಾನ್ ಸಂಘ ಪ್ರಾರಂಭವಾಗಿ 50 ವರ್ಷ ಪೂರ್ಣ ಗೊಳ್ಳಲಿದೆ. 2029ಕ್ಕೆ ಮೊದಲು ದೇಶದ ಎಲ್ಲಾ ಗ್ರಾಮಗಳಲ್ಲಿ ಸಂಘಟನೆಯನ್ನ ಹುಟ್ಟು ಹಾಕಿ, ರೈತರನ್ನ ಅರ್ಥಿಕ ಸ್ವಾವಲಂಭಿಯನ್ನಾಗಿ ಮಾಡುವು ದರ ಜೊತೆಗೆ ಈ ದೇಶದ ಬೆನ್ನೆಲುಬು ಆಗಿರುವ ಕೃಷಿಯನ್ನ ಮತ್ತೊಮ್ಮೆ ಅತ್ಯಂತ ಎತ್ತರಕ್ಕೆ ಕೊಂಡೊಯ್ಯುವ ಹೊಣೆ ನಮ್ಮೆಲ್ಲ ಕಾರ್ಯಕರ್ತರ ಮೇಲಿದೆ. ಭಾರತೀಯ ಕಿಸಾನ್ ಸಂಘ ರೈತರ ಹಿತಾಸಕ್ತಿಗಾಗಿ ಅವರನ್ನು ಸಂಘಟಿಸಿ , ಅವರ ಸಮಸ್ಯೆಗಳನ್ನ ಪರಿಹರಿಸುವ ನಿಟ್ಟಿನಲ್ಲಿ ನೇರವಾಗಿ ಸರಕಾರಗಳೊಂದಿಗೆ ಸಮಾಲೋಚನೆ ನಡೆಸುತ್ತದೆ ಎಂದರು.

ಜಿಲ್ಲೆಯಲ್ಲಿ ಈ ಬಾರಿ ಮಳೆಯ ಪ್ರಮಾಣ ಪ್ರಾರಂಭದಲ್ಲೇ ಗಣನೀಯ ವಾಗಿ ಕಡಿಮೆ ಆಗಿದ್ದರ ಕಾರಣ ಕೃಷಿ ಚಟುವಟಿಕೆಗಳು ಇನ್ನೂ ಸಮರ್ಪಕವಾದ ವೇಗ ಪಡೆದಿಲ್ಲ. ಕಾಡುಪ್ರಾಣಿಗಳ ಸಮಸ್ಯೆ, ಭೂಮಿ ಫಲವತ್ತತೆ ಕಡಿಮೆ ಆಗಿ, ಕಾರ್ಮಿಕರ ಕೊರತೆ ಹಾಗೂ ಕಾರ್ಮಿಕರ ದುಬಾರಿ ವೇತನದ ಕಾರಣಕ್ಕೆ ಈ ಜಿಲ್ಲೆಯ ಕೃಷಿ ಬಹಳ ಹಿನ್ನಡೆಯನ್ನ ಕಂಡುಕೊಂಡಿದೆ ಎಂದರು.

ಈ ಎಲ್ಲಾ ಅಂಶಗಳಿಗೆ ಪರ್ಯಾಯ ಮಾರ್ಗೋಪಾಯಗಳನ್ನ ರೈತರು, ವಿಜ್ಞಾನಿಗಳು ಹಾಗೂ ಸರಕಾರಗಳ ಮೂಲಕ ಕಂಡುಕೊಳ್ಳಬೇಕಾದ ಅಗತ್ಯತೆ ಇದೆ. ಈ ಕಾರ್ಯ ಭಾರತೀಯ ಕಿಸಾನ್ ಸಂಘದಂತಹ ಸಂಘಟನೆ ಯಿಂದ ಮಾತ್ರ ಸಾಧ್ಯ. ಸಂಘಟನೆ ಸದೃಡವಾಗಿ ಬೆಳೆಯಬೇಕಾದರೆ ಕಾರ್ಯಕರ್ತರ ನಿರ್ಮಾಣ ಕೂಡ ಅತೀ ಅವಶ್ಯಕ. ಆ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ, ತರಬೇತಿಯನ್ನು ಕೈಗೊಂಡಿದ್ದೇವೆ ಎಂದು ಸಾಯಿ ರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಭಾ.ಕಿ.ಸಂ. ದಕ್ಷಿಣ ಪ್ರಾಂತ ಅಧ್ಯಕ್ಷ ರಮೇಶ್‌ರಾಜು, ದಕ್ಷಿಣ ಪ್ರಾಂತ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಜೈನ್, ಉಪಾಧ್ಯಕ್ಷರಾದ ಶ್ರೀನಿವಾಸ ಭಟ್, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಸ್ವಾಗತಿಸಿ, ಜಿಲ್ಲೆಯಲ್ಲಿ ಸಂಘಟನೆಯ ಬೆಳವಣಿಗೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ವಂದಿಸಿದರು.

ಭಾಕಿಸಂ ರಾ.ಅಧ್ಯಕ್ಷ ಸಾಯಿ ರೆಡ್ಡಿ ಅವರು ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರಲ್ಲದೇ, ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮ ಸಮಿತಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ, ಮಾರ್ಗದರ್ಶನ ನೀಡಿದರು. ಬಳಿಕ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X