Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೈಬರ್ ವಂಚಕರ ಬಗ್ಗೆ ಗೃಹಲಕ್ಷ್ಮೀ...

ಸೈಬರ್ ವಂಚಕರ ಬಗ್ಗೆ ಗೃಹಲಕ್ಷ್ಮೀ ಫಲಾನುಭವಿಗಳು ಜಾಗೃತರಾಗಿರಿ: ರಮೇಶ್ ಕಾಂಚನ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 Jun 2026 8:48 PM IST
share
ಸೈಬರ್ ವಂಚಕರ ಬಗ್ಗೆ ಗೃಹಲಕ್ಷ್ಮೀ ಫಲಾನುಭವಿಗಳು ಜಾಗೃತರಾಗಿರಿ: ರಮೇಶ್ ಕಾಂಚನ್ ಎಚ್ಚರಿಕೆ

ಉಡುಪಿ, ಜೂ.25: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಗುರಿಯಾಗಿರಿಸಿಕೊಂಡು ಸೈಬರ್ ವಂಚಕರು ಯೋಜನೆಯ ಹಣ ಮಂಜೂರು ಮಾಡುವುದಾಗಿ ಹೇಳಿ ಬ್ಯಾಂಕ್ ಖಾತೆ ಮತ್ತು ಓಟಿಪಿ ಪಡೆದು ಹಣ ಕಬಳಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಗೃಹಲಕ್ಷ್ಮೀ ಫಲಾನುಭವಿಗಳು ಹೆಚ್ಚಿನ ಜಾಗೃತೆ ವಹಿಸ ಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನಷ್ಠ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಫಲಾನುಭವಿ ಮಹಿಳೆಯರಿಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದಾರೆ.

ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಈ ಬಗ್ಗೆ ಯಾವುದೇ ಅನುಮಾನಾಸ್ಪದ ಕರೆ ಬಂದಾಗ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಿ ದೂರು ನೀಡಬೇಕು. ವಂಚನೆಗೊಳಗಾದ ಒಂದು ಗಂಟೆಯ ಒಳಗೆ ಸಹಾಯವಾಣಿಗೆ ದೂರು ನೀಡಿದಾಗ ಶೇ.90ರಷ್ಟು ಹಣ ಮರುಪಾವತಿ ಆಗುವ ಸಾಧ್ಯತೆಗಳಿರುವುದಾಗಿ ತಿಳಿಸಿದ ಕಾಂಚನ್, ಈ ಬಗ್ಗೆ ಫಲಾನುಭವಿಗಳು ಜಾಗರೂಕರಾಗಿ ಇರುವಂತೆ ಅರಿವು ಮೂಡಿಸಬೇಕು ಎಂದರು.

ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತಿದ್ದು, ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಆಗಬೇಕು. ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನಾ ಸಮಿತಿಯ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ. ಗ್ಯಾರಂಟಿ ಯೋಜ ನೆಯ ಸೌಲಭ್ಯಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.

ಉಡುಪಿ ತಾಲೂಕಿನ ಕೆಲವು ಹೊಸ ರೂಟ್‌ಗಳಿಗೆ ಹೊಸ ಬಸ್‌ಗಳ ಬೇಡಿಕೆ ಯನ್ನು ಜಿಲ್ಲಾ ಸಮಿತಿಗೆ ಕಳುಹಿಸಿದ್ದು, ಆದಷ್ಟು ತ್ವರಿತಗತಿಯಲ್ಲಿ ಬಸ್‌ಗಳು ಸಂಚಾರಗೊಳ್ಳುವ ಭರವಸೆ ಇರುವುದಾಗಿ ತಿಳಿಸಿದ ರಮೇಶ್ ಕಾಂಚನ್, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಚಿತ ಬಸ್‌ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್ಲಿಕೇಷನ್ ಪಾರ್ ಸ್ಟೂಡೆಂಟ್ ಪಾಸ್ ಫಾರ್ಮ್ ಡೌನ್‌ಲೋಡ್ ಮಾಡಿಕೊಂಡು, ಇದರಲ್ಲಿ ವಿದ್ಯಾರ್ಥಿ ಹೆಸರು, ಭಾವಚಿತ್ರ, ಪ್ರಯಾಣ ಮಾಡುವ ರೂಟ್‌ನ ವಿವರ, ಶಾಲಾ/ ಕಾಲೇಜಿನಿಂದ ನೀಡಲಾದ ಫೀಸ್ ಪೇಮೆಂಟ್ ಸ್ಲಿಪ್ / ಸ್ಟಡಿ ಸರ್ಟಿಫಿಕೇಟ್ / ಆಧಾರ್ ಗಳೊಂದಿಗೆ ಅದೇ ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿದಾಗ ಅಕ್ನಾಲೆಡ್ಜ್‌ಮೆಂಟ್ ದೊರೆಯಲಿದೆ. ಕಡಿಯಾಳಿಯಲ್ಲಿರುವ ಏಜೆನ್ಸಿಯಲ್ಲಿ ಈ ಬಸ್‌ಪಾಸ್ ಅನ್ನು ಮಾಡಿಕೊಡಲಾಗುವುದು ಎಂದರು.

ತುರ್ತು ವೈದ್ಯಕೀಯ ಚಿಕಿತ್ಸೆ ಅವಶ್ಯವಿರುವ ಸಾರ್ವಜನಿಕರು ಹೊಸ ಪಡಿತರ ಚೀಟಿ ಪಡೆಯಲು, ಅವರ ಆನಾರೋಗ್ಯ ಸಂಬಂಧಿತ ದಾಖಲಾತಿ, ಸ್ಕ್ಯಾನಿಂಗ್ ರಿಪೋರ್ಟ್, ಆದಾಯ ಪ್ರಮಾಣ ಪತ್ರದೊಂದಿಗೆ ಕರ್ನಾಟಕ ಒನ್ ಸೆಂಟರ್‌ನಲ್ಲಿ ಅಪ್ಲಿಕೇಷನ್ ಹಾಕಿದಾಗ ಅದರಲ್ಲಿ 103 ಕಾಯಿಲೆಗಳ ಪಟ್ಟಿಯನ್ನು ಆಹಾರ ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸಲಾಗಿದೆ. ಇದಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಿದಲ್ಲಿ ನಿಯಮಾನುಸಾರ ಪರಿಶೀಲಿಸಿ, ಪಡಿತರ ಚೀಟಿ ನೀಡಲಾಗುವುದು ಎಂದ ಅವರು, ಆರೋಗ್ಯ ಸಮಸ್ಯೆ ಹೊಂದಿರುವ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಗೃಹಜ್ಯೋತಿ ಯೋಜನೆಯಡಿ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ ಅರ್ಹರಿಗೆ ಯೋಜನೆಯ ಪ್ರಯೋಜನ ಪಡೆಯುವಂತೆ ಮಾಡಬೇಕು. ಉಡುಪಿ ತಾಲೂಕಿನಲ್ಲಿ ಕೆಲವು ವಿದ್ಯಾರ್ಥಿಗಳು ಕೆಲಸಕ್ಕೆ ಸೇರಿದರೂ ಸಹ ಯುವನಿಧಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಅನರ್ಹ ಪಟ್ಟಿ ತಯಾರಿಸಿ ನೀಡುವಂತೆ ತಿಳಿಸಿದ ಅವರು, ಯುವನಿಧಿ ಯೋಜನೆಯ ಸೌಲಭ್ಯ ಅರ್ಹ ವಿದ್ಯಾರ್ಥಿಗಳಿಗೆ ತಲುಪು ವಂತಾಗಲು ಮುಂದಿನ ದಿನಗಳಲ್ಲಿ ಉಡುಪಿ ತಾಲೂಕಿನಲ್ಲಿ ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಯುವನಿಧಿ ಬಗ್ಗೆ ಮಾಹಿತಿ ಕಾರ್ಯಾಗಾರವೊಂದನ್ನು ಆಯೋಜಿಸುವುದಾಗಿ ಕಾಂಚನ್ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕಿ ಫರ್ಜಾನಾ ಎಂ, ಸಮಿತಿ ಸದಸ್ಯರು, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಗೃಹಲಕ್ಷ್ಮೀ: 2318 ಫಲಾನುಭವಿಗಳ ಮರಣ

ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಗೃಹಲಕ್ಷ್ಮೀ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಮೊತ್ತದ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದ್ದು, ಸಮಿತಿ ಈಗಾಗಲೇ 2318 ಮರಣ ಹೊಂದಿದವರ ಪಟ್ಟಿಯನ್ನು ಸರಕಾರಕ್ಕೆ ಕಳುಹಿಸಲಾಗಿದೆ ಎಂದು ರಮೇಶ್ ಕಾಂಚನ್ ಸಭೆಗೆ ಮಾಹಿತಿ ನೀಡಿದರು.

ಇವರು ಯಾವ ಊರಿನವರು ಎಂಬ ಹೆಸರು ನೀಡಿರುವುದಿಲ್ಲ. ಸಂಬಂಧಪಟ್ಟ ಅಂಗನವಾಡಿ ಶಿಕ್ಷಕರ ಮೂಲಕ ಮರಣ ಹೊಂದಿದವರ ವಿವರ ಸಂಗ್ರಹಿಸುವ ಕೆಲಸವನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ರಮೇಶ್ ಕಾಂಚನ್ ತಿಳಿಸಿದರು.

‘ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಾರ್ವಜನಿಕರು ಮತ್ತು ಫಲಾನುಭವಿ ಮಹಿಳೆಯರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಗೆ/ವದಂತಿಗಳಿಗೆ ಕಿವಿಗೊಡಬಾರದು. ಪ್ರಸ್ತುತ ಸರಕಾರದಿಂದ ಯಾವುದೇ ಮಾರ್ಗಸೂಚಿಗಳು ಬಂದಿರುವುದಿಲ್ಲ. ಗ್ಯಾರಂಟಿ ಯೋಜನೆಗಳು ಈ ಹಿಂದಿನಂತೆಯೇ ಮುಂದುವರೆಯಲಿದ್ದು, ಯಾರೂ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು.

-ರಮೇಶ್ ಕಾಂಚನ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನಷ್ಠ್ಠಾನ ಸಮಿತಿಯ ಅಧ್ಯಕ್ಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X