ಕಾರ್ಕಳ: ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ಕಾರ್ಕಳ : ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಉದ್ಘಾಟಿಸಿ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಲಾ ಪೋಲಿಯೊ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ರೋಟರಿ ಸಂಸ್ಥೆಯ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, 2026-27 ರ ನಿಯೋಜಿತ ಅಧ್ಯಕ್ಷ ಕೆ ವಿಜೇಂದ್ರ ಕುಮಾರ್, ನಿಯೋಜಿತ ಸಹಾಯಕ ಗೌವರ್ನರ್ ಸುರೇಶ್ ನಾಯಕ್, ರೋಟರಿ ಸದಸ್ಯರಾದ ರೊ. ವಸಂತ್ ಎಂ, ರೊ. ಚೇತನ್ ಕುಮಾರ್, ತಾಲೂಕು ಆಸ್ಪತ್ರೆಯ ಫಿಸೀಷಿಯನ್ ಡಾ.ಚಂದ್ರಕಾಂತ್, ಮಕ್ಕಳ ತಜ್ಞೆ ಡಾ.ಸೌಜನ್ಯಾ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ದಿಶಾ ಕಿಶನ್, ಆಯುಷ್ ವೈದ್ಯಾಧಿಕಾರಿ ಡಾ.ಸುಜಾತಾ ಶೆಟ್ಟಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿಕಲಾ, ಹಿರಿಯ ಶುಶ್ರೂಷಕಾಧಿಕಾರಿ ಮೇರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ ಧಾರೆಕರ್, ಸಮುದಾಯ ಆರೋಗ್ಯ ಅಧಿಕಾರಿ ಹರಿಣಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ವಂದಿಸಿದರು. ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು.




