ತುಳುವ ಮಹಾಸಭೆ ಇಂಟರ್‌ನ್ಯಾಶನಲ್ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ

ಮಂಗಳೂರು: ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಶನಲ್‌ನ ಅಧ್ಯಕ್ಷರಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಹಿರಿಯ ಸಮಾಜಸೇವಕ, ಉದ್ಯಮಿ ಸರ್ವೋತ್ತಮ ಶೆಟ್ಟಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಪಾರೀಕ ಗ್ರಾಮದವರಾದ ಸರ್ವೋತ್ತಮ ಶೆಟ್ಟಿ ಅವರು ಕಳೆದ 48 ವರ್ಷಗಳಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಕನ್ನಡ ಮತ್ತು ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. 2028ರ ಶತಮಾನೋತ್ಸವವನ್ನು ಭಾರತ ಸೇರಿದಂತೆ ವಿಶ್ವದ ವಿವಿಧ ದೇಶಗಳಲ್ಲಿ ವಿಜೃಂಭಣೆಯಿಂದ ಆಚರಿಸುವುದರೊಂದಿಗೆ, ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪದೊಂದಿಗೆ ವಿಶ್ವದ ತುಳುವರನ್ನು ಒಂದುಗೂಡಿಸಿ, ಭಾಷೆ, ಸಂಸ್ಕೃತಿ, ಪರಂಪರೆ, ಇತಿಹಾಸ ಹಾಗೂ ಜ್ಞಾನ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ, ಸಂಶೋಧನಾ ಹಾಗೂ ಸಾಮಾಜಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತುಳುವ ಮಹಾಸಭೆ ಇಂಟರ್‌ನ್ಯಾಶನಲ್ ಪ್ರಕಟನೆಯಲ್ಲಿ ತಿಳಿಸಿದೆ.




