Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿನ ಪಿತೃ ಪ್ರಧಾನ ಮನಸ್ಥಿತಿ...

ಸಮಾಜದಲ್ಲಿನ ಪಿತೃ ಪ್ರಧಾನ ಮನಸ್ಥಿತಿ ಬದಲಾವಣೆ ಅಗತ್ಯ: ಡಾ.ಭಾರತಿದೇವಿ

ವಾರ್ತಾಭಾರತಿವಾರ್ತಾಭಾರತಿ29 Jun 2026 9:22 PM IST
share
ಸಮಾಜದಲ್ಲಿನ ಪಿತೃ ಪ್ರಧಾನ ಮನಸ್ಥಿತಿ ಬದಲಾವಣೆ ಅಗತ್ಯ: ಡಾ.ಭಾರತಿದೇವಿ

ಕುಂದಾಪುರ, ಜೂ.29: ಜಾತಿ, ಧರ್ಮ, ವರ್ಗ ಇವುಗಳ ಅಂತರ್ ಸಂಬಂಧವನ್ನು ಅರ್ಥ ಮಾಡಿಕೊಳ್ಳದೆ ಮಹಿಳಾ ಚಳುವಳಿಯ ಯಶಸ್ಸನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹೆಣ್ಣು ಮಕ್ಕಳ ಸಬಲೀಕರಣವಾಗಬೇಕಾದರೆ ಸಮಾಜದಲ್ಲಿನ ಪಿತೃ ಪ್ರಧಾನ ಮನಸ್ಥಿತಿ ಬದಲಾಗಬೇಕಾಗಿದೆ ಎಂದು ಕನ್ನಡ ಪ್ರಾಧ್ಯಾಪಕಿ ಡಾ.ಭಾರತಿದೇವಿ ಪಿ.ಶಿವಮೊಗ್ಗ ಹೇಳಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ, ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ಕುಂದಾಪುರ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ‘ಕನ್ನಡ ಮಹಿಳಾ ಚಳವಳಿಗಳು’ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ನಮ್ಮಲ್ಲಿನ ಮನಸ್ಥಿತಿಗಳನ್ನು ಕಾನೂನುಗಳ ಮೂಲಕವಲ್ಲ, ಬದಲು ಸಮಾಜದಲ್ಲಿರುವ ಲಿಂಗಸೂಕ್ಷ್ಮತೆ ಅರಿವಿ ನೊಂದಿಗೆ ಬದಲಾಯಿಸಿಕೊಳ್ಳ ಬೇಕಾಗಿದೆ. ಮಾಧ್ಯಮ ಯಾವುದಾದರೇನು, ನಮ್ಮ ದೃಷ್ಟಿಕೋನ ಬದಲಾಯಿಸಿ ಕೊಳ್ಳಬೇಕು. ಇವತ್ತು ಹೆಣ್ಣು ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬಂದು ತಮ್ಮ ಧ್ವನಿಯನ್ನು ತಾವೇ ಎತ್ತಬೇಕಾಗಿದೆ ಎಂದರು.

ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ.ರೇಖಾ ಬನ್ನಾಡಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಹೊರತರಲಾದ ಮಹಿಳಾ ಮುನ್ನಡೆ ಪುಸ್ತಕಗಳನ್ನು ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸಮುದಾಯ ಕುಂದಾಪುರ ಅಧ್ಯಕ್ಷ ಡಾ.ಸದಾನಂದ ಬೈಂದೂರು ಮಾತನಾಡಿ, 50ನೇ ವರ್ಷದ ನೆನಪಿನ ಕಾರ್ಯಕ್ರಮಗಳ ಭಾಗವಾಗಿ ಈ ಸರಣಿ ಉಪನ್ಯಾಸಗಳನ್ನು ಆಯೋಜಿಸಲಾಗುತ್ತಿದೆ. ಜನಪರ ವಾದ ಮೌಲ್ಯ ಬಿತ್ತನೆಯಲ್ಲಿ ಸಮುದಾಯ ಸಂಘಟನೆಯು ಮುಂಚೂಣಿ ಯಲ್ಲಿದೆ ಎಂದು ತಿಳಿಸಿದರು.

ಅಕಾಡೆಮಿ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನ ಹಾಗೂ ಸಮೂಹ ಪ್ರಜ್ಞೆ ಎಂಬುದು ಮಹಿಳೆಯರಲ್ಲಿ ಸದಾ ಜಾಗೃತವಾಗಿರಬೇಕು ಎಂದು ಹೇಳಿದರು.

ಸಮುದಾಯದ ಕಾರ್ಯದರ್ಶಿ ರವಿ ವಿ.ಎಂ. ಸ್ವಾಗತಿಸಿದರು. ಸಮುದಾಯದ ಸದಸ್ಯ ರಮೇಶ್ ಗುಲ್ವಾಡಿ ವಂದಿಸಿದರು. ಚಕೋರ ಜಿಲ್ಲಾ ಸಂಚಾಲಕ ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಡೆದ ಸಂವಾದದಲ್ಲಿ ನಮ್ಮ ಭೂಮಿ ಸಿಡಬ್ಲ್ಯೂಸಿ ಕಾರ್ಯಕರ್ತ ಗಣೇಶ್ ಶೆಟ್ಟಿ, ಶಿಫಾನಾ ಹೊಸಂಗಡಿ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X