ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜೂ.29: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಸಿಇಟಿ, ನೀಟ್ ಹಾಗೂ ಜೆಇಇ ಮೂಲಕ ಆಯ್ಕೆಯಾಗುವ ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಸರಕಾರಿ ಕಾಲೇಜು/ ಖಾಸಗಿ/ ಮ್ಯಾನೇಟ್‌ಮೆಂಟ್ ಕೋಟಾದಡಿ ಅರಿವು ಸಾಲ ಯೋಜನೆಯಡಿಯಲ್ಲಿ ಗರಿಷ್ಠ 5 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ನಿಗಮದ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ತಾಲೂಕು ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.






