ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಉಚಿತ ತರಬೇತಿ ಕಾರ್ಯಗಾರ

ಉಡುಪಿ : ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯಲ್ಲಿ ಸರಿ ಸುಮಾರು 6,000ದಷ್ಟು ಸಿವಿಲ್ ಮತ್ತು ಪೋಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಸರಕಾರ ಅರ್ಜಿಗಳನ್ನು ಕರೆದಿದ್ದು, ಸದರಿ ಹುದ್ದೆಗೆ ನಿಗದಿಪಡಿಸಿದ ಲಿಖಿತ ಪರೀಕ್ಷೆಗೆ ಪೂರ್ವ ಭಾವಿಯಾಗಿ ಜುಲೈ ಐದರಂದು ರವಿವಾರ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಉಡುಪಿಯ ಕೋಟ ಶಿವರಾಮ ಕಾರಂತ ಥೀಂಪಾರ್ಕಿನಲ್ಲಿ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕೋಟದ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಹಾಗೂ ಓಂ ಪ್ರೆಂಡ್ಸ್ ಕುಂದಾಪುರ ಇವರ ಸಹಯೋಗದಲ್ಲಿ ಉಚಿತ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಕಾರ್ಯಗಾರದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಕಾರ್ಯಗಾರವನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.
ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಹಿಂದುಳಿದ ವರ್ಗದ ಕಲ್ಯಾಣ ಅಧಿಕಾರಿ ಹಾಕಪ್ಪ ಲಮಾಣಿ ಮತ್ತು ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.




